2 Chronicles 6:12
ಆಗ ಇಸ್ರಾಯೇಲಿನ ಸಭೆಯ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ಅವನು ನಿಂತು ತನ್ನ ಕೈಗಳನ್ನು ಚಾಚಿದನು.
And he stood | וַֽיַּעֲמֹ֗ד | wayyaʿămōd | va-ya-uh-MODE |
before | לִפְנֵי֙ | lipnēy | leef-NAY |
altar the | מִזְבַּ֣ח | mizbaḥ | meez-BAHK |
of the Lord | יְהוָ֔ה | yĕhwâ | yeh-VA |
of presence the in | נֶ֖גֶד | neged | NEH-ɡed |
all | כָּל | kāl | kahl |
the congregation | קְהַ֣ל | qĕhal | keh-HAHL |
Israel, of | יִשְׂרָאֵ֑ל | yiśrāʾēl | yees-ra-ALE |
and spread forth | וַיִּפְרֹ֖שׂ | wayyiprōś | va-yeef-ROSE |
his hands: | כַּפָּֽיו׃ | kappāyw | ka-PAIV |
Cross Reference
Isaiah 50:10
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.
Psalm 143:6
ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
Psalm 63:4
ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
Job 11:13
ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
Exodus 9:33
ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದು ತನ್ನ ಕೈಗಳನ್ನು ಕರ್ತನ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆನೆಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.
1 Timothy 2:8
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
Psalm 141:2
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
Psalm 68:31
ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
Psalm 29:1
ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
Psalm 28:2
ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
2 Kings 23:3
ಅರಸನು ಸ್ತಂಭದ ಬಳಿಯಲ್ಲಿ ನಿಂತು ಕರ್ತನನ್ನು ಹಿಂಬಾಲಿಸು ವದಕ್ಕೂ ಆತನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆ ಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ಕೈಕೊಳ್ಳುವದಕ್ಕೂ ಈ ಪುಸ್ತಕದಲ್ಲಿ ಬರೆದಿ ರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವ ದಕ್ಕೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿ ದನು; ಜನರೆಲ್ಲರೂ ಒಡಂಬಡಿಕೆಗೆ ಒಪ್ಪಿದರು.
2 Kings 11:14
ಅವಳು ದೃಷ್ಟಿಸಿ ನೋಡುವಾಗ ಇಗೋ, ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿ ಯಲ್ಲಿ ನಿಂತಿದ್ದನು. ಪ್ರಧಾನರೂ ತುತೂರಿ ಊದು ವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದಿದರು. ಆಗ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದು ಕೊಂಡು--ದ್ರೋಹ, ದ್ರೋಹ ಎಂದು ಕೂಗಿದಳು.
1 Kings 8:22
ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--