2 Kings 2:11
ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
And it came to pass, | וַיְהִ֗י | wayhî | vai-HEE |
as they | הֵ֣מָּה | hēmmâ | HAY-ma |
still | הֹֽלְכִ֤ים | hōlĕkîm | hoh-leh-HEEM |
on, went | הָלוֹךְ֙ | hālôk | ha-loke |
and talked, | וְדַבֵּ֔ר | wĕdabbēr | veh-da-BARE |
that, behold, | וְהִנֵּ֤ה | wĕhinnē | veh-hee-NAY |
chariot a appeared there | רֶֽכֶב | rekeb | REH-hev |
fire, of | אֵשׁ֙ | ʾēš | aysh |
and horses | וְס֣וּסֵי | wĕsûsê | veh-SOO-say |
of fire, | אֵ֔שׁ | ʾēš | aysh |
and parted | וַיַּפְרִ֖דוּ | wayyapridû | va-yahf-REE-doo |
them both | בֵּ֣ין | bên | bane |
asunder; | שְׁנֵיהֶ֑ם | šĕnêhem | sheh-nay-HEM |
and Elijah | וַיַּ֙עַל֙ | wayyaʿal | va-YA-AL |
went up | אֵ֣לִיָּ֔הוּ | ʾēliyyāhû | A-lee-YA-hoo |
by a whirlwind | בַּֽסְּעָרָ֖ה | bassĕʿārâ | ba-seh-ah-RA |
into heaven. | הַשָּׁמָֽיִם׃ | haššāmāyim | ha-sha-MA-yeem |
Cross Reference
2 Kings 6:17
ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
Psalm 104:3
ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
Hebrews 1:14
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
Psalm 68:17
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
Zechariah 6:1
ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
Zechariah 3:8
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
Habakkuk 3:8
ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
Ezekiel 10:9
ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು.
Ezekiel 1:4
ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
2 Kings 2:1
ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
Genesis 5:24
ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
Mark 16:19
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.