2 Kings 9:14
ಹೀಗೆ ನಿಂಷಿಯ ಮಗನಾಗಿ ರುವ ಯೆಹೋಷಾಫಾಟನ ಮಗನಾದ ಯೇಹುವು ಯೆಹೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿ ದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೆಹೋರಾಮನೂ ಎಲ್ಲಾ ಇಸ್ರಾಯೇಲ್ಯರೂ ಗಿಲ್ಯಾ ದಿನ ರಾಮೋತಿನಲ್ಲಿ ಕಾಯುತ್ತಾ ಇದ್ದರು.
So Jehu | וַיִּתְקַשֵּׁ֗ר | wayyitqaššēr | va-yeet-ka-SHARE |
the son | יֵה֛וּא | yēhûʾ | yay-HOO |
of Jehoshaphat | בֶּן | ben | ben |
son the | יְהֽוֹשָׁפָ֥ט | yĕhôšāpāṭ | yeh-hoh-sha-FAHT |
of Nimshi | בֶּן | ben | ben |
conspired | נִמְשִׁ֖י | nimšî | neem-SHEE |
against | אֶל | ʾel | el |
Joram. | יוֹרָ֑ם | yôrām | yoh-RAHM |
Joram (Now | וְיוֹרָם֩ | wĕyôrām | veh-yoh-RAHM |
had | הָיָ֨ה | hāyâ | ha-YA |
kept | שֹׁמֵ֜ר | šōmēr | shoh-MARE |
Ramoth-gilead, | בְּרָמֹ֣ת | bĕrāmōt | beh-ra-MOTE |
גִּלְעָ֗ד | gilʿād | ɡeel-AD | |
he | ה֚וּא | hûʾ | hoo |
all and | וְכָל | wĕkāl | veh-HAHL |
Israel, | יִשְׂרָאֵ֔ל | yiśrāʾēl | yees-ra-ALE |
because | מִפְּנֵ֥י | mippĕnê | mee-peh-NAY |
of Hazael | חֲזָאֵ֖ל | ḥăzāʾēl | huh-za-ALE |
king | מֶֽלֶךְ | melek | MEH-lek |
of Syria. | אֲרָֽם׃ | ʾărām | uh-RAHM |
Cross Reference
2 Kings 8:28
ಅವನು ಅಹಾಬನ ಮಗನಾದ ಯೋರಾಮನ ಸಂಗಡ ಗಿಲ್ಯಾದಿನಲ್ಲಿರುವ ರಾಮೋ ತಿಗೆ ಅರಾಮ್ಯರ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದರು.
1 Kings 22:3
ಇಸ್ರಾ ಯೇಲಿನ ಅರಸನು ತನ್ನ ಸೇವಕರಿಗೆ--ಗಿಲ್ಯಾದಿನ ಲ್ಲಿರುವ ರಾಮೋತ್ ನಮ್ಮದೆಂದು ಅರಿಯಿರಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದು ಕೊಳ್ಳದೆ ಸುಮ್ಮನೆ ಇದ್ದೇವೆ ಅಂದನು.
2 Kings 15:30
ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
2 Kings 10:9
ಉದಯ ಕಾಲದಲ್ಲಿ ಏನಾಯಿತೆಂದರೆ, ಅವನು ಹೊರಟು ನಿಂತು ಎಲ್ಲಾ ಜನರಿಗೆ ಹೇಳಿದ್ದೇನಂದರೆ -- ನೀವು ನೀತಿವಂತರು; ಇಗೋ, ನಾನು ನನ್ನ ಯಜಮಾನನ ಮೇಲೆ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದೆನು.
2 Kings 9:31
ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
2 Kings 8:12
ಆಗ ಹಜಾಯೇ ಲನು--ನನ್ನ ಒಡೆಯನು ಅಳುವದೇನು ಅಂದನು.ಅದಕ್ಕವನು -- ಇಸ್ರಾಯೇಲ್ ಮಕ್ಕಳಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ; ನೀನು ಅವರ ಕೋಟೆಗಳಿಗೆ ಬೆಂಕಿ ಹೊತ್ತಿಸಿ ಅವರ ಯೌವನ ಸ್ಥರನ್ನು ಕತ್ತಿಯಿಂದ ಕೊಂದು ಅವರ ಕೂಸುಗಳನ್ನು ಅಪ್ಪಳಿಸಿ ಅವರ ಗರ್ಭಿಣೀ ಸ್ತ್ರೀಯರನ್ನು ಸೀಳಿಬಿಡುವಿ ಅಂದನು.
1 Kings 16:16
ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.
1 Kings 16:9
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.
1 Kings 16:7
ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
1 Kings 15:27
ಇಸ್ಸಾಕಾರನ ಮನೆಯವನಾಗಿರುವ ಅಹೀಯನ ಮಗನಾದ ಬಾಷನು ಅವನಿಗೆ ವಿರೋಧವಾಗಿದ್ದು ಫಿಲಿಷ್ಟಿಯರಿಗೆ ಉಂಟಾದ ಗಿಬ್ಬೆತೋನಿನಲ್ಲಿ ಅವನನ್ನು ಹೊಡೆದುಬಿಟ್ಟನು. ಯಾಕಂದರೆ ನಾದಾಬನೂ ಸಮಸ್ತ ಇಸ್ರಾಯೇಲ್ಯರೂ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು.