Exodus 23
1 ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
2 ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
3 ಬಡವನಿಗೆ ವ್ಯಾಜ್ಯ ದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
4 ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ ಅದು ನಿನಗೆ ಸಿಕ್ಕಿದರೆ ನೀನು ಅದನ್ನು ಖಂಡಿತವಾಗಿ ತಿರಿಗಿ ಅವನಿಗೆ ತಂದುಕೊಡಬೇಕು.
5 ನಿನ್ನನ್ನು ಹಗೆ ಮಾಡುವವನ ಕತ್ತೆ ಹೊರೆಯ ಕೆಳಗೆ ಬಿದ್ದಿರುವದನ್ನು ನೀನು ಕಂಡಾಗ ಅವನಿಗೆ ಸಹಾಯ ಮಾಡಲು ಮನಸ್ಸಿಲ್ಲದಿದ್ದರೂ ನೀನು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
6 ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬೇಡ.
7 ಸುಳ್ಳಿನ ವಿಷಯಗಳಿಂದ ನೀನು ದೂರ ವಿರು; ನಿರಪರಾಧಿಯನ್ನೂ ನೀತಿವಂತನನ್ನೂ ಕೊಲ್ಲ ಬೇಡ, ಯಾಕಂದರೆ ನಾನು ದುಷ್ಟನನ್ನು ನೀತಿವಂತ ನೆಂದು ನಿರ್ಣಯಿಸುವದಿಲ್ಲ.
8 ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
9 ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
10 ಆರು ವರುಷ ನಿನ್ನ ಭೂಮಿಗೆ ಬೀಜಹಾಕಿ ಅದರ ಬೆಳೆಯನ್ನು ಕೂಡಿಸಬೇಕು.
11 ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
12 ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
14 ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು.
15 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
16 ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು.
17 ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
18 ನನಗೆ ಸಮರ್ಪಿಸುವ ಯಜ್ಞದ ರಕ್ತವನ್ನು ಹುಳಿ ಇರುವ ರೊಟ್ಟಿಯ ಸಂಗಡ ಅರ್ಪಿಸಬಾರದು ಇಲ್ಲವೆ ನನಗೆ ಅರ್ಪಿಸಿದ ಯಜ್ಞದ ಕೊಬ್ಬು ಬೆಳಗಿನ ವರೆಗೆ ಇರಬಾರದು.
19 ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
20 ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
21 ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ.
22 ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
23 ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
24 ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
25 ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.
26 ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
27 ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು.
28 ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
29 ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ
30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿ ಸಿಕೊಳ್ಳುವ ವರೆಗೆ ಸ್ವಲ್ಪಸ್ವಲ್ಪವಾಗಿ ಹೊರಡಿಸುವೆನು.
31 ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ.
32 ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.
33 ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
1 Thou shalt not raise a false report: put not thine hand with the wicked to be an unrighteous witness.
2 Thou shalt not follow a multitude to do evil; neither shalt thou speak in a cause to decline after many to wrest judgment:
3 Neither shalt thou countenance a poor man in his cause.
4 If thou meet thine enemy’s ox or his ass going astray, thou shalt surely bring it back to him again.
5 If thou see the ass of him that hateth thee lying under his burden, and wouldest forbear to help him, thou shalt surely help with him.
6 Thou shalt not wrest the judgment of thy poor in his cause.
7 Keep thee far from a false matter; and the innocent and righteous slay thou not: for I will not justify the wicked.
8 And thou shalt take no gift: for the gift blindeth the wise, and perverteth the words of the righteous.
9 Also thou shalt not oppress a stranger: for ye know the heart of a stranger, seeing ye were strangers in the land of Egypt.
10 And six years thou shalt sow thy land, and shalt gather in the fruits thereof:
11 But the seventh year thou shalt let it rest and lie still; that the poor of thy people may eat: and what they leave the beasts of the field shall eat. In like manner thou shalt deal with thy vineyard, and with thy oliveyard.
12 Six days thou shalt do thy work, and on the seventh day thou shalt rest: that thine ox and thine ass may rest, and the son of thy handmaid, and the stranger, may be refreshed.
13 And in all things that I have said unto you be circumspect: and make no mention of the name of other gods, neither let it be heard out of thy mouth.
14 Three times thou shalt keep a feast unto me in the year.
15 Thou shalt keep the feast of unleavened bread: (thou shalt eat unleavened bread seven days, as I commanded thee, in the time appointed of the month Abib; for in it thou camest out from Egypt: and none shall appear before me empty:)
16 And the feast of harvest, the firstfruits of thy labours, which thou hast sown in the field: and the feast of ingathering, which is in the end of the year, when thou hast gathered in thy labours out of the field.
17 Three times in the year all thy males shall appear before the Lord God.
18 Thou shalt not offer the blood of my sacrifice with leavened bread; neither shall the fat of my sacrifice remain until the morning.
19 The first of the firstfruits of thy land thou shalt bring into the house of the Lord thy God. Thou shalt not seethe a kid in his mother’s milk.
20 Behold, I send an Angel before thee, to keep thee in the way, and to bring thee into the place which I have prepared.
21 Beware of him, and obey his voice, provoke him not; for he will not pardon your transgressions: for my name is in him.
22 But if thou shalt indeed obey his voice, and do all that I speak; then I will be an enemy unto thine enemies, and an adversary unto thine adversaries.
23 For mine Angel shall go before thee, and bring thee in unto the Amorites, and the Hittites, and the Perizzites, and the Canaanites, and the Hivites, and the Jebusites: and I will cut them off.
24 Thou shalt not bow down to their gods, nor serve them, nor do after their works: but thou shalt utterly overthrow them, and quite break down their images.
25 And ye shall serve the Lord your God, and he shall bless thy bread, and thy water; and I will take sickness away from the midst of thee.
26 There shall nothing cast their young, nor be barren, in thy land: the number of thy days I will fulfil.
27 I will send my fear before thee, and will destroy all the people to whom thou shalt come, and I will make all thine enemies turn their backs unto thee.
28 And I will send hornets before thee, which shall drive out the Hivite, the Canaanite, and the Hittite, from before thee.
29 I will not drive them out from before thee in one year; lest the land become desolate, and the beast of the field multiply against thee.
30 By little and little I will drive them out from before thee, until thou be increased, and inherit the land.
31 And I will set thy bounds from the Red sea even unto the sea of the Philistines, and from the desert unto the river: for I will deliver the inhabitants of the land into your hand; and thou shalt drive them out before thee.
32 Thou shalt make no covenant with them, nor with their gods.
33 They shall not dwell in thy land, lest they make thee sin against me: for if thou serve their gods, it will surely be a snare unto thee.
Exodus 14 in Tamil and English
1 ಕರ್ತನು ಮಾತನಾಡಿ ಮೋಶೆಗೆ--
And the Lord spake unto Moses, saying,
2 ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
Speak unto the children of Israel, that they turn and encamp before Pi-hahiroth, between Migdol and the sea, over against Baal-zephon: before it shall ye encamp by the sea.
3 ಫರೋಹನು ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ--ಅವರು ದೇಶದಲ್ಲಿ ಸಿಕ್ಕಿಕೊಂಡರು. ಅರಣ್ಯವು ಅವರನ್ನು ಒಳಗೆ ಮುಚ್ಚಿಬಿಟ್ಟಿತು ಎಂದು ಹೇಳುವನು.
For Pharaoh will say of the children of Israel, They are entangled in the land, the wilderness hath shut them in.
4 ಇದಲ್ಲದೆ ಫರೋಹನು ಅವರನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು; ಫರೋಹನಲ್ಲಿಯೂ ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು; ಆಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿಯುವರು ಎಂದು ಹೇಳಿದನು. ಅವರು ಹಾಗೆಯೇ ಮಾಡಿದರು.
And I will harden Pharaoh’s heart, that he shall follow after them; and I will be honoured upon Pharaoh, and upon all his host; that the Egyptians may know that I am the Lord. And they did so.
5 ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
And it was told the king of Egypt that the people fled: and the heart of Pharaoh and of his servants was turned against the people, and they said, Why have we done this, that we have let Israel go from serving us?
6 ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
And he made ready his chariot, and took his people with him:
7 ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
And he took six hundred chosen chariots, and all the chariots of Egypt, and captains over every one of them.
8 ಐಗುಪ್ತದ ಅರಸನಾದ ಫರೋಹನ ಹೃದಯವನ್ನು ಕರ್ತನು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲ್ ಮಕ್ಕಳು ಧೈರ್ಯ ದಿಂದ ಹೊರಗೆ ಹೋದರು.
And the Lord hardened the heart of Pharaoh king of Egypt, and he pursued after the children of Israel: and the children of Israel went out with an high hand.
9 ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.
But the Egyptians pursued after them, all the horses and chariots of Pharaoh, and his horsemen, and his army, and overtook them encamping by the sea, beside Pi-hahiroth, before Baal-zephon.
10 ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.
And when Pharaoh drew nigh, the children of Israel lifted up their eyes, and, behold, the Egyptians marched after them; and they were sore afraid: and the children of Israel cried out unto the Lord.
11 ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?
And they said unto Moses, Because there were no graves in Egypt, hast thou taken us away to die in the wilderness? wherefore hast thou dealt thus with us, to carry us forth out of Egypt?
12 ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.
Is not this the word that we did tell thee in Egypt, saying, Let us alone, that we may serve the Egyptians? For it had been better for us to serve the Egyptians, than that we should die in the wilderness.
13 ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
And Moses said unto the people, Fear ye not, stand still, and see the salvation of the Lord, which he will shew to you to day: for the Egyptians whom ye have seen to day, ye shall see them again no more for ever.
14 ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
The Lord shall fight for you, and ye shall hold your peace.
15 ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.
And the Lord said unto Moses, Wherefore criest thou unto me? speak unto the children of Israel, that they go forward:
16 ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
But lift thou up thy rod, and stretch out thine hand over the sea, and divide it: and the children of Israel shall go on dry ground through the midst of the sea.
17 ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
And I, behold, I will harden the hearts of the Egyptians, and they shall follow them: and I will get me honour upon Pharaoh, and upon all his host, upon his chariots, and upon his horsemen.
18 ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
And the Egyptians shall know that I am the Lord, when I have gotten me honour upon Pharaoh, upon his chariots, and upon his horsemen.
19 ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
And the angel of God, which went before the camp of Israel, removed and went behind them; and the pillar of the cloud went from before their face, and stood behind them:
20 ಅದು ಐಗುಪ್ತ್ಯರ ದಂಡಿಗೂ ಇಸ್ರಾಯೇಲ್ಯರ ದಂಡಿಗೂ ನಡುವೆ ಬಂದಿತು. ಅದು ಅವರಿಗೆ ಮೇಘವೂ ಕತ್ತಲೂ ಆಗಿದ್ದು ಇಸ್ರಾಯೇಲ್ಯರಿಗೆ ರಾತ್ರಿ ಯಲ್ಲಿ ಬೆಳಕು ಕೊಡುವಂಥದ್ದಾಗಿದ್ದದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಿಲ್ಲ.
And it came between the camp of the Egyptians and the camp of Israel; and it was a cloud and darkness to them, but it gave light by night to these: so that the one came not near the other all the night.
21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
And Moses stretched out his hand over the sea; and the Lord caused the sea to go back by a strong east wind all that night, and made the sea dry land, and the waters were divided.
22 ಹೀಗೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯ ದಲ್ಲಿ ಒಣ ನೆಲದಲ್ಲೇ ಹೊರಟು ಹೋದರು. ನೀರು ಅವರಿಗೆ ಎಡಬಲದಲ್ಲಿ ಗೋಡೆಯಾಗಿತ್ತು.
And the children of Israel went into the midst of the sea upon the dry ground: and the waters were a wall unto them on their right hand, and on their left.
23 ಐಗು ಪ್ತ್ಯರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆಯ ಸವಾರರೂ ಅವರನ್ನು ಹಿಂದಟ್ಟಿ ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.
And the Egyptians pursued, and went in after them to the midst of the sea, even all Pharaoh’s horses, his chariots, and his horsemen.
24 ಬೆಳಗಿನ ಜಾವದಲ್ಲಿ ಕರ್ತನು ಅಗ್ನಿ ಮೇಘಗಳ ಸ್ತಂಭದೊಳಗಿಂದ ಐಗುಪ್ತ್ಯರ ದಂಡಿನ ಕಡೆಗೆ ನೋಡಿ ಅದನ್ನು ತೊಂದರೆಪಡಿಸಿ
And it came to pass, that in the morning watch the Lord looked unto the host of the Egyptians through the pillar of fire and of the cloud, and troubled the host of the Egyptians,
25 ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು. ಆಗ--ಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ. ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು.
And took off their chariot wheels, that they drave them heavily: so that the Egyptians said, Let us flee from the face of Israel; for the Lord fighteth for them against the Egyptians.
26 ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು.
And the Lord said unto Moses, Stretch out thine hand over the sea, that the waters may come again upon the Egyptians, upon their chariots, and upon their horsemen.
27 ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
And Moses stretched forth his hand over the sea, and the sea returned to his strength when the morning appeared; and the Egyptians fled against it; and the Lord overthrew the Egyptians in the midst of the sea.
28 ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
And the waters returned, and covered the chariots, and the horsemen, and all the host of Pharaoh that came into the sea after them; there remained not so much as one of them.
29 ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
But the children of Israel walked upon dry land in the midst of the sea; and the waters were a wall unto them on their right hand, and on their left.
30 ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.
Thus the Lord saved Israel that day out of the hand of the Egyptians; and Israel saw the Egyptians dead upon the sea shore.
31 ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
And Israel saw that great work which the Lord did upon the Egyptians: and the people feared the Lord, and believed the Lord, and his servant Moses.