Ezekiel 17:2
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನು ಒಗಟಾಗಿ ಹೇಳು.
Ezekiel 17:2 in Other Translations
King James Version (KJV)
Son of man, put forth a riddle, and speak a parable unto the house of Israel;
American Standard Version (ASV)
Son of man, put forth a riddle, and speak a parable unto the house of Israel;
Bible in Basic English (BBE)
Son of man, give out a dark saying, and make a comparison for the children of Israel,
Darby English Bible (DBY)
Son of man, put forth a riddle, and speak a parable unto the house of Israel,
World English Bible (WEB)
Son of man, put forth a riddle, and speak a parable to the house of Israel;
Young's Literal Translation (YLT)
`Son of man, put forth a riddle, and use a simile unto the house of Israel,
| Son | בֶּן | ben | ben |
| of man, | אָדָ֕ם | ʾādām | ah-DAHM |
| put forth | ח֥וּד | ḥûd | hood |
| a riddle, | חִידָ֖ה | ḥîdâ | hee-DA |
| speak and | וּמְשֹׁ֣ל | ûmĕšōl | oo-meh-SHOLE |
| a parable | מָשָׁ֑ל | māšāl | ma-SHAHL |
| unto | אֶל | ʾel | el |
| the house | בֵּ֖ית | bêt | bate |
| of Israel; | יִשְׂרָאֵֽל׃ | yiśrāʾēl | yees-ra-ALE |
Cross Reference
Ezekiel 20:49
ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
1 Corinthians 13:12
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
Mark 4:33
ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
Matthew 13:35
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
Matthew 13:13
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ
Hosea 12:10
ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
Ezekiel 24:3
ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
2 Samuel 12:1
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
Judges 14:12
ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
Judges 9:8
ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇ ಕಿಸಿಕೊಳ್ಳುವದಕ್ಕಾಗಿ ಹೊರಟು ಹೋಗಿ ಇಪ್ಪೆಯ ಮರಕ್ಕೆ--ನೀನು ನಮ್ಮನ್ನು ಆಳು ಅಂದವು.