Isaiah 30:31
ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
Isaiah 30:31 in Other Translations
King James Version (KJV)
For through the voice of the LORD shall the Assyrian be beaten down, which smote with a rod.
American Standard Version (ASV)
For through the voice of Jehovah shall the Assyrian be dismayed; with his rod will he smite `him'.
Bible in Basic English (BBE)
For through the voice of the Lord the Assyrian will be broken, and the Lord's rod will be lifted up against him.
Darby English Bible (DBY)
For through the voice of Jehovah shall the Assyrian be broken down: he will smite [him] with the rod.
World English Bible (WEB)
For through the voice of Yahweh shall the Assyrian be dismayed; with his rod will he strike [him].
Young's Literal Translation (YLT)
For from the voice of Jehovah broken down `is' Asshur, With a rod He smiteth.
| For | כִּֽי | kî | kee |
| through the voice | מִקּ֥וֹל | miqqôl | MEE-kole |
| of the Lord | יְהוָ֖ה | yĕhwâ | yeh-VA |
| Assyrian the shall | יֵחַ֣ת | yēḥat | yay-HAHT |
| be beaten down, | אַשּׁ֑וּר | ʾaššûr | AH-shoor |
| which smote | בַּשֵּׁ֖בֶט | baššēbeṭ | ba-SHAY-vet |
| with a rod. | יַכֶּֽה׃ | yakke | ya-KEH |
Cross Reference
Isaiah 11:4
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
Isaiah 10:5
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
Isaiah 9:4
ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
Micah 5:5
ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು.
Isaiah 37:32
ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು.
Isaiah 30:30
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
Isaiah 10:24
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
Isaiah 10:15
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
Isaiah 10:12
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
Psalm 125:5
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Psalm 17:13
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.