Cross Reference
Job 2:10
ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
James 1:12
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
Romans 9:20
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
James 1:4
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
1 Peter 1:7
ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
Job 34:10
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
Job 34:18
ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?
Job 40:4
ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.