1 ಕೊರಿಂಥದವರಿಗೆ 10:10 in Kannada

ಕನ್ನಡ ಕನ್ನಡ ಬೈಬಲ್ 1 ಕೊರಿಂಥದವರಿಗೆ 1 ಕೊರಿಂಥದವರಿಗೆ 10 1 ಕೊರಿಂಥದವರಿಗೆ 10:10

1 Corinthians 10:10
ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.

1 Corinthians 10:91 Corinthians 101 Corinthians 10:11

1 Corinthians 10:10 in Other Translations

King James Version (KJV)
Neither murmur ye, as some of them also murmured, and were destroyed of the destroyer.

American Standard Version (ASV)
Neither murmur ye, as some of them murmured, and perished by the destroyer.

Bible in Basic English (BBE)
And do not say evil things against the Lord, as some of them did, and destruction overtook them.

Darby English Bible (DBY)
Neither murmur ye, as some of them murmured, and perished by the destroyer.

World English Bible (WEB)
Neither grumble, as some of them also grumbled, and perished by the destroyer.

Young's Literal Translation (YLT)
neither murmur ye, as also some of them did murmur, and did perish by the destroyer.

Neither
μηδὲmēdemay-THAY
murmur
ye,
γογγύζετεgongyzetegohng-GYOO-zay-tay
as
καθὼςkathōska-THOSE
some
καίkaikay
of
them
τινεςtinestee-nase
also
αὐτῶνautōnaf-TONE
murmured,
ἐγόγγυσανegongysanay-GOHNG-gyoo-sahn
and
καὶkaikay
were
destroyed
ἀπώλοντοapōlontoah-POH-lone-toh
of
ὑπὸhypoyoo-POH
the
τοῦtoutoo
destroyer.
ὀλοθρευτοῦolothreutouoh-loh-thrayf-TOO

Cross Reference

2 ಸಮುವೇಲನು 24:16
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

ವಿಮೋಚನಕಾಂಡ 12:23
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.

1 ಪೂರ್ವಕಾಲವೃತ್ತಾ 21:15
ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

ಅರಣ್ಯಕಾಂಡ 16:41
ಆದರೆ ಮರುದಿನದಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.

ಇಬ್ರಿಯರಿಗೆ 11:28
ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.

ಅರಣ್ಯಕಾಂಡ 14:2
ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.

ಅರಣ್ಯಕಾಂಡ 14:37
ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

ಕೀರ್ತನೆಗಳು 106:25
ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.

ಫಿಲಿಪ್ಪಿಯವರಿಗೆ 2:14
ಗುಣಗುಟ್ಟದೆ ಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.

ಪ್ರಕಟನೆ 16:1
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.

ಯೂದನು 1:16
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.

ವಿಮೋಚನಕಾಂಡ 16:2
ಆಗ ಇಸ್ರಾಯೇಲ್‌ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.

ವಿಮೋಚನಕಾಂಡ 17:2
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.

ಅರಣ್ಯಕಾಂಡ 14:27
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

ಅರಣ್ಯಕಾಂಡ 16:46
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.

2 ಪೂರ್ವಕಾಲವೃತ್ತಾ 32:21
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

ಮತ್ತಾಯನು 13:39
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.

ಅಪೊಸ್ತಲರ ಕೃತ್ಯಗ 12:23
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

2 ಥೆಸಲೊನೀಕದವರಿಗೆ 1:7
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ

ವಿಮೋಚನಕಾಂಡ 15:24
ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.