2 ಅರಸುಗಳು 14:19 in Kannada

ಕನ್ನಡ ಕನ್ನಡ ಬೈಬಲ್ 2 ಅರಸುಗಳು 2 ಅರಸುಗಳು 14 2 ಅರಸುಗಳು 14:19

2 Kings 14:19
ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.

2 Kings 14:182 Kings 142 Kings 14:20

2 Kings 14:19 in Other Translations

King James Version (KJV)
Now they made a conspiracy against him in Jerusalem: and he fled to Lachish; but they sent after him to Lachish, and slew him there.

American Standard Version (ASV)
And they made a conspiracy against him in Jerusalem; and he fled to Lachish: but they sent after him to Lachish, and slew him there.

Bible in Basic English (BBE)
Now they made a secret design against him in Jerusalem; and he went in flight to Lachish, but they sent after him to Lachish and put him to death there.

Darby English Bible (DBY)
And they made a conspiracy against him in Jerusalem; and he fled to Lachish; and they sent after him to Lachish, and slew him there.

Webster's Bible (WBT)
Now they made a conspiracy against him in Jerusalem: and he fled to Lachish; but they sent after him to Lachish, and slew him there.

World English Bible (WEB)
They made a conspiracy against him in Jerusalem; and he fled to Lachish: but they sent after him to Lachish, and killed him there.

Young's Literal Translation (YLT)
And they make a conspiracy against him in Jerusalem, and he fleeth to Lachish, and they send after him to Lachish, and put him to death there,

Now
they
made
וַיִּקְשְׁר֨וּwayyiqšĕrûva-yeek-sheh-ROO
a
conspiracy
עָלָ֥יוʿālāywah-LAV
against
קֶ֛שֶׁרqešerKEH-sher
Jerusalem:
in
him
בִּירֽוּשָׁלִַ֖םbîrûšālaimbee-roo-sha-la-EEM
and
he
fled
וַיָּ֣נָסwayyānosva-YA-nose
Lachish;
to
לָכִ֑ישָׁהlākîšâla-HEE-sha
but
they
sent
וַיִּשְׁלְח֤וּwayyišlĕḥûva-yeesh-leh-HOO
after
אַֽחֲרָיו֙ʾaḥărāywAH-huh-rav
Lachish,
to
him
לָכִ֔ישָׁהlākîšâla-HEE-sha
and
slew
וַיְמִתֻ֖הוּwaymituhûvai-mee-TOO-hoo
him
there.
שָֽׁם׃šāmshahm

Cross Reference

ಯೆಹೋಶುವ 10:31
ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೊರಟು ಅದರ ಎದುರಿಗೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧ ಮಾಡಿದನು.

ಮಿಕ 1:13
ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.

2 ಪೂರ್ವಕಾಲವೃತ್ತಾ 25:27
ಆದರೆ ಅಮಚ್ಯನು ಕರ್ತನ ಕಡೆಯಿಂದ ತೊಲಗಿಹೋದ ತರುವಾಯ ಅವರು ಯೆರೂಸಲೇಮಿ ನಲ್ಲಿ ಅವನ ಮೇಲೆ ಒಳಸಂಚು ಮಾಡಿದರು. ಆದ ಕಾರಣ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅವನ ಹಿಂದೆ ಲಾಕೀಷಿಗೆ ಕಳುಹಿಸಿ ಅಲ್ಲಿ ಅವನನ್ನು ಕೊಂದುಹಾಕಿದರು.

2 ಅರಸುಗಳು 21:23
ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು.

2 ಅರಸುಗಳು 18:17
ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.

2 ಅರಸುಗಳು 18:14
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.

2 ಅರಸುಗಳು 15:30
ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 15:25
ಆದರೆ ಅವನ ಅಧಿಪತಿಯಾದಂಥ, ರೆಮಲ್ಯನ ಮಗನಾದ ಪೆಕಹನು ಅವನ ಮೇಲೆ ಒಳಸಂಚು ಮಾಡಿ ಅರ್ಗೋಬನ್ನೂ ಅರ್ಯೇಯನ್ನೂ ಗಿಲ್ಯಾದಿನ ಜನರಲ್ಲಿ ಐವತ್ತು ಮಂದಿಯನ್ನೂ ತನ್ನ ಸಂಗಡ ಕೂಡಿಸಿ ಕೊಂಡು ಸಮಾರ್ಯದಲ್ಲಿ ಅರಸನಿಗಿದ್ದ ಅರಮನೆ ಯೊಳಗೆ ಅವನನ್ನು ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 15:14
ಯಾಕಂದರೆ ಗಾದಿಯ ಮಗನಾದ ಮೆನಹೇಮನು ತಿರ್ಚದಿಂದ ಹೊರಟು ಹೋಗಿ ಸಮಾರ್ಯಕ್ಕೆ ಬಂದು ಸಮಾರ್ಯ ದಲ್ಲಿ ಯಾಬೇಷನ ಮಗನಾದ ಶಲ್ಲೂಮನನ್ನು ಹೊಡೆದು ಕೊಂದುಹಾಕಿ ಅವನಿಗೆ ಬದಲಾಗಿ ಅರಸ ನಾದನು.

2 ಅರಸುಗಳು 15:10
ಆಗ ಯಾಬೇಷನ ಮಗನಾದ ಶಲ್ಲೂಮನು ಅವನ ಮೇಲೆ ಒಳಸಂಚು ಮಾಡಿ ಜನರ ಮುಂದೆ ಅವನನ್ನು ಹೊಡೆದು ಕೊಂದು ಹಾಕಿ ಅವನಿಗೆ ಬದಲಾಗಿ ಅರಸನಾದನು.

2 ಅರಸುಗಳು 12:20
ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.

ಯೆಹೋಶುವ 10:3
ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--