ಪ್ರಲಾಪಗಳು 3:32 in Kannada

ಕನ್ನಡ ಕನ್ನಡ ಬೈಬಲ್ ಪ್ರಲಾಪಗಳು ಪ್ರಲಾಪಗಳು 3 ಪ್ರಲಾಪಗಳು 3:32

Lamentations 3:32
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.

Lamentations 3:31Lamentations 3Lamentations 3:33

Lamentations 3:32 in Other Translations

King James Version (KJV)
But though he cause grief, yet will he have compassion according to the multitude of his mercies.

American Standard Version (ASV)
For though he cause grief, yet will he have compassion according to the multitude of his lovingkindnesses.

Bible in Basic English (BBE)
For though he sends grief, still he will have pity in the full measure of his love.

Darby English Bible (DBY)
but if he have caused grief, he will have compassion according to the multitude of his loving-kindnesses:

World English Bible (WEB)
For though he cause grief, yet will he have compassion according to the multitude of his loving kindnesses.

Young's Literal Translation (YLT)
For though He afflicted, yet He hath pitied, According to the abundance of His kindness.

But
כִּ֣יkee
though
אִםʾimeem
he
cause
grief,
הוֹגָ֔הhôgâhoh-ɡA
compassion
have
he
will
yet
וְרִחַ֖םwĕriḥamveh-ree-HAHM
according
to
the
multitude
כְּרֹ֥בkĕrōbkeh-ROVE
of
his
mercies.
חֲסָדָֽו׃ḥăsādāwhuh-sa-DAHV

Cross Reference

ಹೋಶೇ 11:8
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.

ಕೀರ್ತನೆಗಳು 78:38
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಕೀರ್ತನೆಗಳು 106:43
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.

ಲೂಕನು 15:20
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.

ಪ್ರಲಾಪಗಳು 3:22
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.

ಯೆರೆಮಿಯ 31:20
ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.

ಕೀರ್ತನೆಗಳು 103:11
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.

ಕೀರ್ತನೆಗಳು 30:5
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

2 ಅರಸುಗಳು 13:23
ಆದರೆ ಕರ್ತನು ಅಬ್ರಹಾಮನ ಇಸಾಕನ ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಅವರಿಗೆ ದಯಮಾಡಿ ಅವರ ಮೇಲೆ ಕೃಪೆ ತೋರಿಸಿ ಅವರ ಕಡೆಗೆ ತಿರುಗಿದನು. ಇನ್ನೂ ಅವರನ್ನು ನಾಶ ಮಾಡಲು ಅವರನ್ನು ತನ್ನಿಂದ ತೊರೆದು ಬಿಡಲು ಮನಸ್ಸಾಗಲಿಲ್ಲ, ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲೂ ಇಲ್ಲ.

ನ್ಯಾಯಸ್ಥಾಪಕರು 10:16
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

ವಿಮೋಚನಕಾಂಡ 3:7
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ವಿಮೋಚನಕಾಂಡ 2:23
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್‌ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.