Lamentations 3:52
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
Lamentations 3:52 in Other Translations
King James Version (KJV)
Mine enemies chased me sore, like a bird, without cause.
American Standard Version (ASV)
They have chased me sore like a bird, they that are mine enemies without cause.
Bible in Basic English (BBE)
They who are against me without cause have gone hard after me as if I was a bird;
Darby English Bible (DBY)
They that are mine enemies without cause have chased me sore like a bird.
World English Bible (WEB)
They have chased me sore like a bird, those who are my enemies without cause.
Young's Literal Translation (YLT)
Hunted me sore as a bird have my enemies without cause.
| Mine enemies | צ֥וֹד | ṣôd | tsode |
| chased | צָד֛וּנִי | ṣādûnî | tsa-DOO-nee |
| me sore, | כַּצִּפּ֖וֹר | kaṣṣippôr | ka-TSEE-pore |
| bird, a like | אֹיְבַ֥י | ʾôybay | oy-VAI |
| without cause. | חִנָּֽם׃ | ḥinnām | hee-NAHM |
Cross Reference
ಕೀರ್ತನೆಗಳು 35:19
ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.
ಕೀರ್ತನೆಗಳು 35:7
ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
ಯೋಹಾನನು 15:25
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ಯೆರೆಮಿಯ 38:4
ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
ಯೆರೆಮಿಯ 37:18
ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
ಯೆರೆಮಿಯ 37:15
ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.
ಕೀರ್ತನೆಗಳು 119:161
ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
ಕೀರ್ತನೆಗಳು 109:3
ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
ಕೀರ್ತನೆಗಳು 69:4
ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ಕೀರ್ತನೆಗಳು 11:1
ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
1 ಸಮುವೇಲನು 26:18
ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?
1 ಸಮುವೇಲನು 25:28
ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
1 ಸಮುವೇಲನು 24:10
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.