ಅಪೊಸ್ತಲರ ಕೃತ್ಯಗ 14

1 ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.

2 ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.

3 ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.

4 ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.

5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

6 ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ

7 ಅಲ್ಲಿ ಸುವಾರ್ತೆಯನ್ನು ಸಾರಿದರು.

8 ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.

9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--

10 ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.

11 ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.

12 ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;

13 ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.

14 ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--

15 ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

16 ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;

17 ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.

18 ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.

19 ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

20 ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.

21 ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

22 ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.

23 ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.

24 ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು

25 ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು

26 ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.

27 ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.

28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

1 And it came to pass in Iconium, that they went both together into the synagogue of the Jews, and so spake, that a great multitude both of the Jews and also of the Greeks believed.

2 But the unbelieving Jews stirred up the Gentiles, and made their minds evil affected against the brethren.

3 Long time therefore abode they speaking boldly in the Lord, which gave testimony unto the word of his grace, and granted signs and wonders to be done by their hands.

4 But the multitude of the city was divided: and part held with the Jews, and part with the apostles.

5 And when there was an assault made both of the Gentiles, and also of the Jews with their rulers, to use them despitefully, and to stone them,

6 They were ware of it, and fled unto Lystra and Derbe, cities of Lycaonia, and unto the region that lieth round about:

7 And there they preached the gospel.

8 And there sat a certain man at Lystra, impotent in his feet, being a cripple from his mother’s womb, who never had walked:

9 The same heard Paul speak: who stedfastly beholding him, and perceiving that he had faith to be healed,

10 Said with a loud voice, Stand upright on thy feet. And he leaped and walked.

11 And when the people saw what Paul had done, they lifted up their voices, saying in the speech of Lycaonia, The gods are come down to us in the likeness of men.

12 And they called Barnabas, Jupiter; and Paul, Mercurius, because he was the chief speaker.

13 Then the priest of Jupiter, which was before their city, brought oxen and garlands unto the gates, and would have done sacrifice with the people.

14 Which when the apostles, Barnabas and Paul, heard of, they rent their clothes, and ran in among the people, crying out,

15 And saying, Sirs, why do ye these things? We also are men of like passions with you, and preach unto you that ye should turn from these vanities unto the living God, which made heaven, and earth, and the sea, and all things that are therein:

16 Who in times past suffered all nations to walk in their own ways.

17 Nevertheless he left not himself without witness, in that he did good, and gave us rain from heaven, and fruitful seasons, filling our hearts with food and gladness.

18 And with these sayings scarce restrained they the people, that they had not done sacrifice unto them.

19 And there came thither certain Jews from Antioch and Iconium, who persuaded the people, and, having stoned Paul, drew him out of the city, supposing he had been dead.

20 Howbeit, as the disciples stood round about him, he rose up, and came into the city: and the next day he departed with Barnabas to Derbe.

21 And when they had preached the gospel to that city, and had taught many, they returned again to Lystra, and to Iconium, and Antioch,

22 Confirming the souls of the disciples, and exhorting them to continue in the faith, and that we must through much tribulation enter into the kingdom of God.

23 And when they had ordained them elders in every church, and had prayed with fasting, they commended them to the Lord, on whom they believed.

24 And after they had passed throughout Pisidia, they came to Pamphylia.

25 And when they had preached the word in Perga, they went down into Attalia:

26 And thence sailed to Antioch, from whence they had been recommended to the grace of God for the work which they fulfilled.

27 And when they were come, and had gathered the church together, they rehearsed all that God had done with them, and how he had opened the door of faith unto the Gentiles.

28 And there they abode long time with the disciples.

Acts 19 in Tamil and English

1 ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
And it came to pass, that, while Apollos was at Corinth, Paul having passed through the upper coasts came to Ephesus: and finding certain disciples,

2 ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
He said unto them, Have ye received the Holy Ghost since ye believed? And they said unto him, We have not so much as heard whether there be any Holy Ghost.

3 ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
And he said unto them, Unto what then were ye baptized? And they said, Unto John’s baptism.

4 ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
Then said Paul, John verily baptized with the baptism of repentance, saying unto the people, that they should believe on him which should come after him, that is, on Christ Jesus.

5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
When they heard this, they were baptized in the name of the Lord Jesus.

6 ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
And when Paul had laid his hands upon them, the Holy Ghost came on them; and they spake with tongues, and prophesied.

7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
And all the men were about twelve.

8 ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
And he went into the synagogue, and spake boldly for the space of three months, disputing and persuading the things concerning the kingdom of God.

9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
But when divers were hardened, and believed not, but spake evil of that way before the multitude, he departed from them, and separated the disciples, disputing daily in the school of one Tyrannus.

10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
And this continued by the space of two years; so that all they which dwelt in Asia heard the word of the Lord Jesus, both Jews and Greeks.

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
And God wrought special miracles by the hands of Paul:

12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
So that from his body were brought unto the sick handkerchiefs or aprons, and the diseases departed from them, and the evil spirits went out of them.

13 ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
Then certain of the vagabond Jews, exorcists, took upon them to call over them which had evil spirits the name of the Lord Jesus, saying, We adjure you by Jesus whom Paul preacheth.

14 ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
And there were seven sons of one Sceva, a Jew, and chief of the priests, which did so.

15 ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
And the evil spirit answered and said, Jesus I know, and Paul I know; but who are ye?

16 ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
And the man in whom the evil spirit was leaped on them, and overcame them, and prevailed against them, so that they fled out of that house naked and wounded.

17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
And this was known to all the Jews and Greeks also dwelling at Ephesus; and fear fell on them all, and the name of the Lord Jesus was magnified.

18 ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
And many that believed came, and confessed, and shewed their deeds.

19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
Many of them also which used curious arts brought their books together, and burned them before all men: and they counted the price of them, and found it fifty thousand pieces of silver.

20 ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
So mightily grew the word of God and prevailed.

21 ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
After these things were ended, Paul purposed in the spirit, when he had passed through Macedonia and Achaia, to go to Jerusalem, saying, After I have been there, I must also see Rome.

22 ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
So he sent into Macedonia two of them that ministered unto him, Timotheus and Erastus; but he himself stayed in Asia for a season.

23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
And the same time there arose no small stir about that way.

24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
For a certain man named Demetrius, a silversmith, which made silver shrines for Diana, brought no small gain unto the craftsmen;

25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Whom he called together with the workmen of like occupation, and said, Sirs, ye know that by this craft we have our wealth.

26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be no gods, which are made with hands:

27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
So that not only this our craft is in danger to be set at nought; but also that the temple of the great goddess Diana should be despised, and her magnificence should be destroyed, whom all Asia and the world worshippeth.

28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
And when they heard these sayings, they were full of wrath, and cried out, saying, Great is Diana of the Ephesians.

29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
And the whole city was filled with confusion: and having caught Gaius and Aristarchus, men of Macedonia, Paul’s companions in travel, they rushed with one accord into the theatre.

30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
And when Paul would have entered in unto the people, the disciples suffered him not.

31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
And certain of the chief of Asia, which were his friends, sent unto him, desiring him that he would not adventure himself into the theatre.

32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
Some therefore cried one thing, and some another: for the assembly was confused; and the more part knew not wherefore they were come together.

33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
And they drew Alexander out of the multitude, the Jews putting him forward. And Alexander beckoned with the hand, and would have made his defence unto the people.

34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
But when they knew that he was a Jew, all with one voice about the space of two hours cried out, Great is Diana of the Ephesians.

35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
And when the townclerk had appeased the people, he said, Ye men of Ephesus, what man is there that knoweth not how that the city of the Ephesians is a worshipper of the great goddess Diana, and of the image which fell down from Jupiter?

36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Seeing then that these things cannot be spoken against, ye ought to be quiet, and to do nothing rashly.

37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
For ye have brought hither these men, which are neither robbers of churches, nor yet blasphemers of your goddess.

38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Wherefore if Demetrius, and the craftsmen which are with him, have a matter against any man, the law is open, and there are deputies: let them implead one another.

39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
But if ye inquire any thing concerning other matters, it shall be determined in a lawful assembly.

40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
For we are in danger to be called in question for this day’s uproar, there being no cause whereby we may give an account of this concourse.

41 ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
And when he had thus spoken, he dismissed the assembly.