ಅಪೊಸ್ತಲರ ಕೃತ್ಯಗ 28
1 ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
2 ಅಲ್ಲಿಯ ಅನಾಗರಿಕ ಜನರು ನಮಗೆ ತೋರಿಸಿದ ದಯೆಯು ಅಪಾರವಾಗಿತ್ತು; ಆ ಸಮಯ ದಲ್ಲಿ ಮಳೆಯೂ ಚಳಿಯೂ ಇದ್ದದರಿಂದ ಅವರು ಬೆಂಕಿಯನ್ನು ಹೊತ್ತಿಸಿ ನಮ್ಮೆಲ್ಲರನ್ನು ಸೇರಿಸಿಕೊಂಡರು.
3 ಪೌಲನು ಕಟ್ಟಿಗೆಯ ಹೊರೆಯನ್ನು ಕೂಡಿಸಿ ಬೆಂಕಿಯ ಮೇಲೆ ಹಾಕಿದಾಗ ಆ ಕಾವಿನ ದೆಸೆಯಿಂದ ಒಂದು ವಿಷ ಸರ್ಪವು ಹೊರಗೆ ಬಂದು ಅವನ ಕೈಯನ್ನು ಬಿಗಿಯಾಗಿ ಸುತ್ತಿಕೊಂಡಿತು.
4 ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
5 ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
6 ಹೇಗಿದ್ದರೂ ಅವನು ಬಾತುಹೋದಾನು ಇಲ್ಲವೆ ಅಕಸ್ಮಾತ್ತಾಗಿ ಸತ್ತುಬಿದ್ದಾನು ಎಂದು ಅವರು ನೋಡಿಕೊಂಡೇ ಇದ್ದರು; ಬಹಳ ಹೊತ್ತಿನವರೆಗೂ ಅವರು ನೋಡಿದ ಮೇಲೆ ಯಾವ ಅಪಾಯವೂ ಅವನಿಗೆ ಬಾರದೆ ಇರುವದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು ಅವನೊಬ್ಬ ದೇವರೆಂ
7 ಅದೇ ಸ್ಥಳದಲ್ಲಿ ಪೊಪ್ಲಿಯ ಎಂಬ ಆ ದ್ವೀಪದ ಮುಖ್ಯಸ್ಥನಿಗೆ ಆಸ್ತಿ ಇತ್ತು; ಅವನು ನಮ್ಮನ್ನು ಸೇರಿಸಿಕೊಂಡು ಮೂರು ದಿವಸ ಆದರದಿಂದ ಸತ್ಕರಿಸಿ ದನು.
8 ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
9 ಇದಾದ ಮೇಲೆ ಆ ದ್ವೀಪದಲ್ಲಿ ರೋಗಗಳಿದ್ದ ಬೇರೆಯವರೂ ಬಂದು ಸ್ವಸ್ಥರಾದರು.
10 ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
11 ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
12 ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
13 ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
14 ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
15 ಅಲ್ಲಿದ್ದ ಸಹೋದರರು ನಮ್ಮ ವಿಷಯ ವಾಗಿ ಕೇಳಿ ನಮ್ಮನ್ನು ಸಂಧಿಸುವದಕ್ಕಾಗಿ ಅಪ್ಪಿಯ ಪೇಟೆ ಮತ್ತು ತ್ರಿಛತ್ರದ ವರೆಗೆ ಬಂದಾಗ ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರಮಾಡಿ ಧೈರ್ಯ ಗೊಂಡನು.
16 ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
17 ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
18 ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
19 ಆದರೆ ಯೆಹೂದ್ಯರು ಅದಕ್ಕೆ ವಿರೋಧವಾಗಿ ಮಾತನಾಡಿದಾಗ ಕೈಸರನಿಗೆ ಹೇಳಿಕೊಳ್ಳುವಂತೆ ನಾನು ಒತ್ತಾಯ ಮಾಡಲ್ಪಟ್ಟೆನು; ಆದರೆ ನನ್ನ ಸ್ವದೇಶದವರ ಮೇಲೆ ತಪ್ಪು ಹೊರಿಸುವದಕ್ಕಾಗಿ ಅಲ್ಲ.
20 ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
21 ಆಗ ಅವರು ಅವನಿಗೆ--ನಿನ್ನ ವಿಷಯವಾಗಿ ಯೂದಾಯದಿಂದ ನಮಗೆ ಯಾವ ಪತ್ರಗಳು ಬಂದಿಲ್ಲ, ಇಲ್ಲವೆ ಇಲ್ಲಿ ಬಂದ ಸಹೋದರರಲ್ಲಿ ಯಾವನೂ ನಿನ್ನ ವಿಷಯವಾಗಿ ಕೆಟ್ಟದ್ದೇನೂ ತೋರಿಸ ಲಿಲ್ಲ ಮತ್ತು ಹೇಳಲಿಲ್ಲ.
22 ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ; ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು.
23 ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.
24 ಅವನು ಹೇಳಿದ ಮಾತುಗಳನ್ನು ಕೆಲವರು ನಂಬಿ ದರು; ಆದರೆ ಕೆಲವರು ನಂಬದೆ ಹೋದರು.
25 ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
26 ನೀವು ಕೇಳಿದರೂ ಕೇಳಿ ಗ್ರಹಿಸುವದಿಲ್ಲ; ನೋಡಿದರೂ ನೋಡಿ ಕಾಣುವದಿಲ್ಲ;
27 ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
28 ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
29 ಅವನು ಈ ಮಾತುಗಳ ನ್ನಾಡಿದಾಗ ಯೆಹೂದ್ಯರು ಹೊರಟುಹೊಗಿ ತಮ್ಮಲ್ಲಿ ತಾವು ಬಹಳವಾಗಿ ತರ್ಕಿಸಿಕೊಂಡರು.
30 ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.
31 ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.
1 And when they were escaped, then they knew that the island was called Melita.
2 And the barbarous people shewed us no little kindness: for they kindled a fire, and received us every one, because of the present rain, and because of the cold.
3 And when Paul had gathered a bundle of sticks, and laid them on the fire, there came a viper out of the heat, and fastened on his hand.
4 And when the barbarians saw the venomous beast hang on his hand, they said among themselves, No doubt this man is a murderer, whom, though he hath escaped the sea, yet vengeance suffereth not to live.
5 And he shook off the beast into the fire, and felt no harm.
6 Howbeit they looked when he should have swollen, or fallen down dead suddenly: but after they had looked a great while, and saw no harm come to him, they changed their minds, and said that he was a god.
7 In the same quarters were possessions of the chief man of the island, whose name was Publius; who received us, and lodged us three days courteously.
8 And it came to pass, that the father of Publius lay sick of a fever and of a bloody flux: to whom Paul entered in, and prayed, and laid his hands on him, and healed him.
9 So when this was done, others also, which had diseases in the island, came, and were healed:
10 Who also honoured us with many honours; and when we departed, they laded us with such things as were necessary.
11 And after three months we departed in a ship of Alexandria, which had wintered in the isle, whose sign was Castor and Pollux.
12 And landing at Syracuse, we tarried there three days.
13 And from thence we fetched a compass, and came to Rhegium: and after one day the south wind blew, and we came the next day to Puteoli:
14 Where we found brethren, and were desired to tarry with them seven days: and so we went toward Rome.
15 And from thence, when the brethren heard of us, they came to meet us as far as Appii forum, and The three taverns: whom when Paul saw, he thanked God, and took courage.
16 And when we came to Rome, the centurion delivered the prisoners to the captain of the guard: but Paul was suffered to dwell by himself with a soldier that kept him.
17 And it came to pass, that after three days Paul called the chief of the Jews together: and when they were come together, he said unto them, Men and brethren, though I have committed nothing against the people, or customs of our fathers, yet was I delivered prisoner from Jerusalem into the hands of the Romans.
18 Who, when they had examined me, would have let me go, because there was no cause of death in me.
19 But when the Jews spake against it, I was constrained to appeal unto Caesar; not that I had ought to accuse my nation of.
20 For this cause therefore have I called for you, to see you, and to speak with you: because that for the hope of Israel I am bound with this chain.
21 And they said unto him, We neither received letters out of Judaea concerning thee, neither any of the brethren that came shewed or spake any harm of thee.
22 But we desire to hear of thee what thou thinkest: for as concerning this sect, we know that every where it is spoken against.
23 And when they had appointed him a day, there came many to him into his lodging; to whom he expounded and testified the kingdom of God, persuading them concerning Jesus, both out of the law of Moses, and out of the prophets, from morning till evening.
24 And some believed the things which were spoken, and some believed not.
25 And when they agreed not among themselves, they departed, after that Paul had spoken one word, Well spake the Holy Ghost by Esaias the prophet unto our fathers,
26 Saying, Go unto this people, and say, Hearing ye shall hear, and shall not understand; and seeing ye shall see, and not perceive:
27 For the heart of this people is waxed gross, and their ears are dull of hearing, and their eyes have they closed; lest they should see with their eyes, and hear with their ears, and understand with their heart, and should be converted, and I should heal them.
28 Be it known therefore unto you, that the salvation of God is sent unto the Gentiles, and that they will hear it.
29 And when he had said these words, the Jews departed, and had great reasoning among themselves.
30 And Paul dwelt two whole years in his own hired house, and received all that came in unto him,
31 Preaching the kingdom of God, and teaching those things which concern the Lord Jesus Christ, with all confidence, no man forbidding him.
Acts 19 in Tamil and English
1 ಇದಾದ ಮೇಲೆ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮೇಲ್ಭಾ ಗದ ತೀರಗಳನ್ನು ದಾಟಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡನು.
And it came to pass, that, while Apollos was at Corinth, Paul having passed through the upper coasts came to Ephesus: and finding certain disciples,
2 ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
He said unto them, Have ye received the Holy Ghost since ye believed? And they said unto him, We have not so much as heard whether there be any Holy Ghost.
3 ಆಗ ಅವನು ಅವರಿಗೆ--ನೀವು ಯಾವದಕ್ಕಾಗಿ ಬಾಪ್ತಿಸ್ಮ ಮಾಡಿಸಿಕೊಂಡಿರಿ ಎಂದು ಕೇಳಿದನು. ಅದಕ್ಕವರು--ಯೋಹಾನನ ಬಾಪ್ತಿಸ್ಮಕ್ಕನುಸಾರವಾಗಿ ಮಾಡಿಸಿ ಕೊಂಡೆವು ಎಂದು ಹೇಳಿದರು.
And he said unto them, Unto what then were ye baptized? And they said, Unto John’s baptism.
4 ಆಗ ಪೌಲನು--ನಿಜವಾಗಿಯೂ ಯೋಹಾನನು ತನ್ನ ಹಿಂದೆ ಬರುವಾತ ನನ್ನು ಅಂದರೆ ಕ್ರಿಸ್ತ ಯೇಸುವನ್ನು ನಂಬಬೇಕೆಂದು ಜನರಿಗೆ ಹೇಳಿ ಮಾನಸಾಂತರದ ಬಾಪ್ತಿಸ್ಮದಿಂದ ಬಾಪ್ತಿಸ್ಮ ಮಾಡಿಸಿದನು ಎಂದು ಹೇಳಿದನು.
Then said Paul, John verily baptized with the baptism of repentance, saying unto the people, that they should believe on him which should come after him, that is, on Christ Jesus.
5 ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡರು.
When they heard this, they were baptized in the name of the Lord Jesus.
6 ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
And when Paul had laid his hands upon them, the Holy Ghost came on them; and they spake with tongues, and prophesied.
7 ಅವರು ಸುಮಾರು ಹನ್ನೆರಡು ಮಂದಿ ಗಂಡಸರು.
And all the men were about twelve.
8 ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
And he went into the synagogue, and spake boldly for the space of three months, disputing and persuading the things concerning the kingdom of God.
9 ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.
But when divers were hardened, and believed not, but spake evil of that way before the multitude, he departed from them, and separated the disciples, disputing daily in the school of one Tyrannus.
10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
And this continued by the space of two years; so that all they which dwelt in Asia heard the word of the Lord Jesus, both Jews and Greeks.
11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ
And God wrought special miracles by the hands of Paul:
12 ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
So that from his body were brought unto the sick handkerchiefs or aprons, and the diseases departed from them, and the evil spirits went out of them.
13 ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು.
Then certain of the vagabond Jews, exorcists, took upon them to call over them which had evil spirits the name of the Lord Jesus, saying, We adjure you by Jesus whom Paul preacheth.
14 ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
And there were seven sons of one Sceva, a Jew, and chief of the priests, which did so.
15 ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು.
And the evil spirit answered and said, Jesus I know, and Paul I know; but who are ye?
16 ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು.
And the man in whom the evil spirit was leaped on them, and overcame them, and prevailed against them, so that they fled out of that house naked and wounded.
17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
And this was known to all the Jews and Greeks also dwelling at Ephesus; and fear fell on them all, and the name of the Lord Jesus was magnified.
18 ನಂಬಿದ ಅನೇಕರು ಬಂದು ಒಪ್ಪಿಕೊಂಡು ತಮ್ಮ ಕ್ರಿಯೆಗಳನ್ನು ತೋರಿಸಿ ದರು.
And many that believed came, and confessed, and shewed their deeds.
19 ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದ ವರಲ್ಲಿ ಅನೇಕರು ಸಹ ಬಂದು ತಮ್ಮ ಪುಸ್ತಕಗಳನ್ನು ತಂದು ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವು ಗಳ ಕ್ರಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಎಂದು ತಿಳಿದು ಕೊಂಡರು.
Many of them also which used curious arts brought their books together, and burned them before all men: and they counted the price of them, and found it fifty thousand pieces of silver.
20 ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
So mightily grew the word of God and prevailed.
21 ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.
After these things were ended, Paul purposed in the spirit, when he had passed through Macedonia and Achaia, to go to Jerusalem, saying, After I have been there, I must also see Rome.
22 ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
So he sent into Macedonia two of them that ministered unto him, Timotheus and Erastus; but he himself stayed in Asia for a season.
23 ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
And the same time there arose no small stir about that way.
24 ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
For a certain man named Demetrius, a silversmith, which made silver shrines for Diana, brought no small gain unto the craftsmen;
25 ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.
Whom he called together with the workmen of like occupation, and said, Sirs, ye know that by this craft we have our wealth.
26 ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
Moreover ye see and hear, that not alone at Ephesus, but almost throughout all Asia, this Paul hath persuaded and turned away much people, saying that they be no gods, which are made with hands:
27 ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
So that not only this our craft is in danger to be set at nought; but also that the temple of the great goddess Diana should be despised, and her magnificence should be destroyed, whom all Asia and the world worshippeth.
28 ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
And when they heard these sayings, they were full of wrath, and cried out, saying, Great is Diana of the Ephesians.
29 ಆಗ ಊರೆಲ್ಲಾ ಗಲಿಬಿಲಿಯಾಯಿತು; ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನು ಅರಿಸ್ತಾರ್ಕನನ್ನು ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.
And the whole city was filled with confusion: and having caught Gaius and Aristarchus, men of Macedonia, Paul’s companions in travel, they rushed with one accord into the theatre.
30 ಪೌಲನು ಜನರೊಳಗೆ ಹೋಗ ಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.
And when Paul would have entered in unto the people, the disciples suffered him not.
31 ಇದಲ್ಲದೆ ಆಸ್ಯದಲ್ಲಿ ಅವನಿಗೆ ಸ್ನೇಹಿತರಾಗಿದ್ದ ಪ್ರಮುಖರಲ್ಲಿ ಕೆಲವರು ಅವನು ನಾಟಕ ಶಾಲೆಯೊಳಗೆ ಹೋಗಿ ಅಪಾಯಕ್ಕೆ ಗುರಿಮಾಡಿಕೊಳ್ಳ ಬಾರದೆಂದು ಅವನಿಗೆ ಹೇಳಿ ಕಳುಹಿಸಿದರು.
And certain of the chief of Asia, which were his friends, sent unto him, desiring him that he would not adventure himself into the theatre.
32 ಯಾಕಂದರೆ ಕೆಲವರು ಒಂದು ಬಗೆಯಾಗಿ ಮತ್ತೆ ಕೆಲವರು ಇನ್ನೊಂದು ಬಗೆಯಾಗಿ ಕೂಗುತ್ತಿದ್ದರು. ಸಭೆಯು ಗಲಿಬಿಲಿಯಾಗಿತ್ತು ಮತ್ತು ಹೆಚ್ಚಾದ ಜನರಿಗೆ ತಾವು ಕೂಡಿಬಂದಿದ್ದ ಕಾರಣವು ಗೊತ್ತಿರಲಿಲ್ಲ.
Some therefore cried one thing, and some another: for the assembly was confused; and the more part knew not wherefore they were come together.
33 ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
And they drew Alexander out of the multitude, the Jews putting him forward. And Alexander beckoned with the hand, and would have made his defence unto the people.
34 ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ--ಎಫೆಸದವರ ಡಯಾನಿ ದೊಡ್ಡವಳು ಎಂದು ಹೆಚ್ಚು ಕಡಿಮೆ ಎರಡು ಘಂಟೆ ಹೊತ್ತು ಕೂಗಿದರು.
But when they knew that he was a Jew, all with one voice about the space of two hours cried out, Great is Diana of the Ephesians.
35 ಆಗ ಪುರಸಭೆಯ ಕಾರ್ಯದರ್ಶಿಯು ಜನರನ್ನು ಸಮಾಧಾನಪಡಿಸಿ ಹೇಳಿದ್ದೇನಂದರೆ--ಎಫೆಸದ ಜನರೇ, ಎಫೆಸದವರ ಈ ಪಟ್ಟಣವು ಮಹಾದೇವತೆಯಾದ ಡಯಾನಿಯನ್ನೂ ಬೃಹಸ್ಪತಿಯಿಂದ ಕೆಳಗೆ ಬಿದ್ದ ಪ್ರತಿಮೆಯನ್ನೂ ಹೇಗೆ ಆರಾದ್ಧಿಸುವದೆಂದು ತಿಳಿಯದ ಮನುಷ್ಯನು ಯಾವನು?
And when the townclerk had appeased the people, he said, Ye men of Ephesus, what man is there that knoweth not how that the city of the Ephesians is a worshipper of the great goddess Diana, and of the image which fell down from Jupiter?
36 ಈ ಸಂಗತಿ ಅಲ್ಲವೆನ್ನುವದಕ್ಕೆ ಯಾರಿಂದಲೂ ಆಗದಿರುವದರಿಂದ ನೀವು ಶಾಂತಿ ಯಿಂದಿರಬೇಕು; ದುಡುಕಿನಿಂದ ಏನೂ ಮಾಡಬಾರದು.
Seeing then that these things cannot be spoken against, ye ought to be quiet, and to do nothing rashly.
37 ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
For ye have brought hither these men, which are neither robbers of churches, nor yet blasphemers of your goddess.
38 ಹೀಗಿರುವದರಿಂದ ದೇಮೇತ್ರಿಯನಿಗೂ ಅವನ ಪಕ್ಷವನ್ನು ಹಿಡಿದಿರುವ ಕಸಬಿನವರಿಗೂ ಯಾವನ ಮೇಲಾದರೂ ವ್ಯವಹಾರವಿದ್ದರೆ ಕಾನೂನು ಇದೆ, ಅಧಿಪತಿಗಳಿದ್ದಾರೆ, ಒಬ್ಬರ ಮೇಲೊಬ್ಬರು ವ್ಯಾಜ್ಯ ವಾಡಿಕೊಳ್ಳಲಿ.
Wherefore if Demetrius, and the craftsmen which are with him, have a matter against any man, the law is open, and there are deputies: let them implead one another.
39 ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
But if ye inquire any thing concerning other matters, it shall be determined in a lawful assembly.
40 ಯಾಕಂ ದರೆ ಈ ಜನಸಂದಣಿಯನ್ನು ಕುರಿತಾಗಿ ಸಮಾಧಾನ ಹೇಳುವದಕ್ಕೆ ಯಾವ ಕಾರಣವೂ ಇಲ್ಲದಿರುವದರಿಂದ ಈ ದಿನದ ದಂಗೆಯ ವಿಷಯವಾಗಿ ನ್ಯಾಯವಿಚಾರಣೆಗೆ ಗುರಿಯಾಗುವವರಾಗಿದ್ದೇವೆ ಎಂದು ಹೇಳಿ
For we are in danger to be called in question for this day’s uproar, there being no cause whereby we may give an account of this concourse.
41 ಅವನು ಆ ಗುಂಪನ್ನು ಹಾಗೆ ಕಳುಹಿಸಿಬಿಟ್ಟನು.
And when he had thus spoken, he dismissed the assembly.