Index
Full Screen ?
 

ಎಫೆಸದವರಿಗೆ 5:14

Ephesians 5:14 ಕನ್ನಡ ಬೈಬಲ್ ಎಫೆಸದವರಿಗೆ ಎಫೆಸದವರಿಗೆ 5

ಎಫೆಸದವರಿಗೆ 5:14
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.

Wherefore
διὸdiothee-OH
he
saith,
λέγειlegeiLAY-gee
Awake
thou
Ἔγειραι,egeiraiA-gee-ray
that
hooh
sleepest,
καθεύδωνkatheudōnka-THAVE-thone
and
καὶkaikay
arise
ἀνάσταanastaah-NA-sta
from
ἐκekake
the
τῶνtōntone
dead,
νεκρῶνnekrōnnay-KRONE
and
καὶkaikay

ἐπιφαύσειepiphauseiay-pee-FAF-see
Christ
σοιsoisoo
thee
hooh
shall
give
light.
Χριστόςchristoshree-STOSE

Cross Reference

ಯೆಶಾಯ 60:1
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆಶಾಯ 26:19
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

1 ಥೆಸಲೊನೀಕದವರಿಗೆ 5:6
ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ.

ರೋಮಾಪುರದವರಿಗೆ 13:11
ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

ಯೆಶಾಯ 52:1
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.

ಯೋಹಾನನು 5:25
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

ರೋಮಾಪುರದವರಿಗೆ 6:4
ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.

ಕೊಲೊಸ್ಸೆಯವರಿಗೆ 3:1
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಯೆಶಾಯ 51:17
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

2 ತಿಮೊಥೆಯನಿಗೆ 1:10
ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.

1 ಕೊರಿಂಥದವರಿಗೆ 15:34
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.

2 ಕೊರಿಂಥದವರಿಗೆ 4:6
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

ಯೆಹೆಜ್ಕೇಲನು 37:4
ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.

ಲೂಕನು 1:78
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ

ಎಫೆಸದವರಿಗೆ 2:5
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)

ರೋಮಾಪುರದವರಿಗೆ 6:13
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.

ಯೋಹಾನನು 9:5
ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು.

ಯೋಹಾನನು 8:12
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ಯೋಹಾನನು 11:43
ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಅಪೊಸ್ತಲರ ಕೃತ್ಯಗ 13:47
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

2 ತಿಮೊಥೆಯನಿಗೆ 2:26
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

Chords Index for Keyboard Guitar