ಯೆಹೆಜ್ಕೇಲನು 33:29 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 33 ಯೆಹೆಜ್ಕೇಲನು 33:29

Ezekiel 33:29
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.

Ezekiel 33:28Ezekiel 33Ezekiel 33:30

Ezekiel 33:29 in Other Translations

King James Version (KJV)
Then shall they know that I am the LORD, when I have laid the land most desolate because of all their abominations which they have committed.

American Standard Version (ASV)
Then shall they know that I am Jehovah, when I have made the land a desolation and an astonishment, because of all their abominations which they have committed.

Bible in Basic English (BBE)
Then they will be certain that I am the Lord, when I have made the land a waste and a cause of wonder, because of all the disgusting things which they have done,

Darby English Bible (DBY)
And they shall know that I [am] Jehovah, when I have made the land a desolation and an astonishment because of all their abominations which they have committed.

World English Bible (WEB)
Then shall they know that I am Yahweh, when I have made the land a desolation and an astonishment, because of all their abominations which they have committed.

Young's Literal Translation (YLT)
And they have known that I `am' Jehovah, In My making the land a desolation and an astonishment, For all their abominations that they have done.

Then
shall
they
know
וְיָדְע֖וּwĕyodʿûveh-yode-OO
that
כִּֽיkee
I
אֲנִ֣יʾănîuh-NEE
Lord,
the
am
יְהוָ֑הyĕhwâyeh-VA
when
I
have
laid
בְּתִתִּ֤יbĕtittîbeh-tee-TEE

אֶתʾetet
the
land
הָאָ֙רֶץ֙hāʾāreṣha-AH-RETS
most
שְׁמָמָ֣הšĕmāmâsheh-ma-MA
desolate
וּמְשַׁמָּ֔הûmĕšammâoo-meh-sha-MA
because
of
עַ֥לʿalal
all
כָּלkālkahl
their
abominations
תּוֹעֲבֹתָ֖םtôʿăbōtāmtoh-uh-voh-TAHM
which
אֲשֶׁ֥רʾăšeruh-SHER
they
have
committed.
עָשֽׂוּ׃ʿāśûah-SOO

Cross Reference

ಯೆಹೆಜ್ಕೇಲನು 6:7
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.

ಚೆಫನ್ಯ 3:1
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!

ಮಿಕ 6:9
ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.

ಯೆಹೆಜ್ಕೇಲನು 36:17
ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.

ಯೆಹೆಜ್ಕೇಲನು 25:11
ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲನು 23:49
ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.

ಯೆಹೆಜ್ಕೇಲನು 22:25
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಯೆಹೆಜ್ಕೇಲನು 22:2
ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.

ಯೆಹೆಜ್ಕೇಲನು 8:6
ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.

ಯೆಹೆಜ್ಕೇಲನು 7:27
ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲನು 6:11
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.

ಯೆರೆಮಿಯ 5:25
ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.

ಯೆರೆಮಿಯ 5:1
ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

ಕೀರ್ತನೆಗಳು 83:17
ಅವರು ನಾಚಿಕೆಪಟ್ಟು ಎಂದೆಂ ದಿಗೂ ಕಳವಳಗೊಳ್ಳಲಿ; ಹೌದು, ಅವರು ಲಜ್ಜೆ ಯಿಂದ ನಾಶವಾಗಲಿ.

ಕೀರ್ತನೆಗಳು 9:16
ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್‌. ಸೆಲಾ.

2 ಪೂರ್ವಕಾಲವೃತ್ತಾ 36:14
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

2 ಅರಸುಗಳು 17:9
ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

ವಿಮೋಚನಕಾಂಡ 14:18
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.