ಯೆಹೆಜ್ಕೇಲನು 46:10 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 46 ಯೆಹೆಜ್ಕೇಲನು 46:10

Ezekiel 46:10
ಅವರು ಒಳಗೆ ಹೋಗು ವಾಗ ಅವರ ಮಧ್ಯದಲ್ಲಿರುವ ಪ್ರಧಾನನು ಒಳಗೆ ಹೋಗಬೇಕು. ಹೊರಗೆ ಹೋಗುವಾಗ ಹೊರಗೆ ಬರಬೇಕು.

Ezekiel 46:9Ezekiel 46Ezekiel 46:11

Ezekiel 46:10 in Other Translations

King James Version (KJV)
And the prince in the midst of them, when they go in, shall go in; and when they go forth, shall go forth.

American Standard Version (ASV)
And the prince, when they go in, shall go in in the midst of them; and when they go forth, they shall go forth `together'.

Bible in Basic English (BBE)
And the ruler, when they come in, is to come among them, and is to go out when they go out.

Darby English Bible (DBY)
And the prince shall come in in the midst of them, when they come in; and when they go out, they shall go out [together].

World English Bible (WEB)
The prince, when they go in, shall go in with of them; and when they go out, he shall go out.

Young's Literal Translation (YLT)
And the prince in their midst in their coming in cometh in, and in their going out he goeth out.

And
the
prince
וְֽהַנָּשִׂ֑יאwĕhannāśîʾveh-ha-na-SEE
in
the
midst
בְּתוֹכָ֤םbĕtôkāmbeh-toh-HAHM
in,
go
they
when
them,
of
בְּבוֹאָם֙bĕbôʾāmbeh-voh-AM
shall
go
in;
יָב֔וֹאyābôʾya-VOH
forth,
go
they
when
and
וּבְצֵאתָ֖םûbĕṣēʾtāmoo-veh-tsay-TAHM
shall
go
forth.
יֵצֵֽאוּ׃yēṣēʾûyay-tsay-OO

Cross Reference

ಕೀರ್ತನೆಗಳು 42:4
ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.

1 ಪೂರ್ವಕಾಲವೃತ್ತಾ 29:22
ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು.

1 ಪೂರ್ವಕಾಲವೃತ್ತಾ 29:20
ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು.

ಪ್ರಕಟನೆ 2:1
ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡುಕೊಂಡು ಏಳು ಚಿನ್ನದ ದೀಪ ಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಈ ವಿಷಯಗಳನ್ನು ಹೇಳುತ್ತಾನೆ.

ಇಬ್ರಿಯರಿಗೆ 4:14
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

ಇಬ್ರಿಯರಿಗೆ 3:6
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.

ಮತ್ತಾಯನು 28:20
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಮತ್ತಾಯನು 18:20
ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.

ಕೀರ್ತನೆಗಳು 122:1
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.

ನೆಹೆಮಿಯ 8:8
ಹೀಗೆಯೇ ಅವರು ದೇವರ ನ್ಯಾಯಪ್ರಮಾಣದ ಪುಸ್ತಕವನ್ನು ಸ್ಪಷ್ಟವಾಗಿ ಓದಿ ಅದರ ಅರ್ಥವನ್ನು ಹೇಳಿ ಓದಿದ್ದನ್ನು ಜನರಿಗೆ ತಿಳಿಯುವಂತೆ ಮಾಡಿದರು.

2 ಪೂರ್ವಕಾಲವೃತ್ತಾ 34:30
ಆಗ ಅರಸನೂ ಯೆಹೂದದ ಸಮಸ್ತ ಮನುಷ್ಯರೂ ಯೆರೂಸಲೇಮಿನ ನಿವಾಸಿಗಳೂ ಯಾಜ ಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಕರ್ತನ ಆಲಯಕ್ಕೆ ಹೋದರು. ಅವನು ಕರ್ತನ ಆಲಯದಲ್ಲಿ ಕಂಡುಕೊಂಡ ಒಡಂಬಡಿಕೆಯ ಪುಸ್ತಕದ ಮಾತುಗಳನ್ನೆಲ್ಲಾ ಅವರು ಕೇಳುವ ಹಾಗೆ ಓದಿದನು.

2 ಪೂರ್ವಕಾಲವೃತ್ತಾ 29:28
ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು.

2 ಪೂರ್ವಕಾಲವೃತ್ತಾ 20:27
ಕರ್ತನು ಅವರ ಶತ್ರುಗಳ ಮೇಲೆ ಅವರನ್ನು ಸಂತೋ ಷಪಡುವಂತೆ ಮಾಡಿದ್ದರಿಂದ ಅವರು ಸಂತೋಷವಾಗಿ ಯೆರೂಸಲೇಮಿಗೆ ತಿರಿಗಿ ಹೋಗುವದಕ್ಕೆ ಯೆಹೂದ ಯೆರೂಸಲೇಮಿನವರೆಲ್ಲರೂ ಅವರ ಮುಂಭಾಗ ದಲ್ಲಿ ಯೆಹೋಷಾಫಾಟನೂ ಹೊರಟು

2 ಪೂರ್ವಕಾಲವೃತ್ತಾ 7:4
ಆಗ ಅರಸನೂ ಸಮಸ್ತ ಜನರೂ ಕರ್ತ ನಿಗೆ ಬಲಿಗಳನ್ನು ಅರ್ಪಿಸಿದರು.

2 ಪೂರ್ವಕಾಲವೃತ್ತಾ 6:2
ಆದರೆ ನಿನಗೆ ನಿವಾಸದ ಆಲಯವನ್ನೂ ನೀನು ಯುಗಯುಗಾಂತರಗಳಿಗೂ ವಾಸಮಾಡತಕ್ಕ ಸ್ಥಾನವನ್ನೂ ನಾನು ಕಟ್ಟಿಸಿದ್ದೇನೆ ಅಂದನು.

2 ಸಮುವೇಲನು 6:14
ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.