ಯೆಹೆಜ್ಕೇಲನು 7:20 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 7 ಯೆಹೆಜ್ಕೇಲನು 7:20

Ezekiel 7:20
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.

Ezekiel 7:19Ezekiel 7Ezekiel 7:21

Ezekiel 7:20 in Other Translations

King James Version (KJV)
As for the beauty of his ornament, he set it in majesty: but they made the images of their abominations and of their detestable things therein: therefore have I set it far from them.

American Standard Version (ASV)
As for the beauty of his ornament, he set it in majesty; but they made the images of their abominations `and' their detestable things therein: therefore have I made it unto them as an unclean thing.

Bible in Basic English (BBE)
As for their beautiful ornament, they had put it on high, and had made the images of their disgusting and hated things in it: for this cause I have made it an unclean thing to them.

Darby English Bible (DBY)
And he set in majesty his beautiful ornament; but they made therein the images of their abominations [and] of their detestable things: therefore have I made it an impurity unto them.

World English Bible (WEB)
As for the beauty of his ornament, he set it in majesty; but they made the images of their abominations [and] their detestable things therein: therefore have I made it to them as an unclean thing.

Young's Literal Translation (YLT)
As to the beauty of his ornament, For excellency He set it, And the images of their abominations, Their detestable things -- they made in it, Therefore I have given it to them for impurity,

As
for
the
beauty
וּצְבִ֤יûṣĕbîoo-tseh-VEE
ornament,
his
of
עֶדְיוֹ֙ʿedyôed-YOH
he
set
לְגָא֣וֹןlĕgāʾônleh-ɡa-ONE
majesty:
in
it
שָׂמָ֔הוּśāmāhûsa-MA-hoo
but
they
made
וְצַלְמֵ֧יwĕṣalmêveh-tsahl-MAY
the
images
תוֹעֲבֹתָ֛םtôʿăbōtāmtoh-uh-voh-TAHM
abominations
their
of
שִׁקּוּצֵיהֶ֖םšiqqûṣêhemshee-koo-tsay-HEM
and
of
their
detestable
things
עָ֣שׂוּʿāśûAH-soo
therein:
therefore
ב֑וֹvoh

עַלʿalal
have
I
set
כֵּ֛ןkēnkane
it
far
נְתַתִּ֥יוnĕtattîwneh-ta-TEEOO
from
them.
לָהֶ֖םlāhemla-HEM
לְנִדָּֽה׃lĕniddâleh-nee-DA

Cross Reference

ಯೆಹೆಜ್ಕೇಲನು 24:21
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.

ಯೆರೆಮಿಯ 7:30
ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.

ಯೆಹೆಜ್ಕೇಲನು 9:7
ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು.

ಯೆಹೆಜ್ಕೇಲನು 8:15
ಆಮೇಲೆ ನನಗೆ ಆತನು, ಓ ನರಪುತ್ರನೇ, ನೋಡಿದಿಯೋ? ಮತ್ತೊಂದು ಸಾರಿ ತಿರುಗಿಕೋ ಇವುಗಳಿಗಿಂತ ಇನ್ನೂ ದೊಡ್ಡ ಅಸಹ್ಯವಾದವುಗಳನ್ನು ನೋಡುವಿ ಎಂದು ಹೇಳಿದನು.

ಯೆಹೆಜ್ಕೇಲನು 8:7
ಆಗ ಅವನು ನನ್ನನ್ನು ಅಂಗಳದ ಬಾಗಲಿಗೆ ತಂದನು; ಮತ್ತು ನಾನು ನೋಡುವಾಗ ಇಗೋ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು

ಯೆಶಾಯ 64:11
ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.

ಪ್ರಲಾಪಗಳು 2:1
ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!

ಪ್ರಲಾಪಗಳು 2:7
ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.

ಯೆಹೆಜ್ಕೇಲನು 5:11
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.

ಯೆಹೆಜ್ಕೇಲನು 7:22
ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.

ಹಗ್ಗಾಯ 2:3
ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?

ಪ್ರಲಾಪಗಳು 1:10
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.

ಯೆರೆಮಿಯ 7:14
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.

ಕೀರ್ತನೆಗಳು 87:2
ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.

2 ಅರಸುಗಳು 21:7
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು.

2 ಅರಸುಗಳು 23:11
ಬೈಲ ಲ್ಲಿರುವ ಪ್ರಧಾನನಾದ ನಾತಾನ್‌ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು.

1 ಪೂರ್ವಕಾಲವೃತ್ತಾ 29:1
1 ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನಂದರೆ -- ದೇವರು ಒಬ್ಬನನ್ನೇ ಆದುಕೊಂಡ ನನ್ನ ಮಗನಾದ ಸೊಲೊ ಮೋನನು ಚಿಕ್ಕವನಾಗಿಯೂ ಮೃದುವಾಗಿಯೂ ಇದ್ದಾನೆ. ಆದರೆ ಕೆಲಸವು ದೊಡ್ಡದು; ಈ ಅರಮನೆ ಯು ಮನುಷ್ಯರಿಗೋಸ್ಕರವಲ್ಲ, ಕರ್ತನಾದ ದೇವರಿ ಗೋಸ್ಕರವೇ.

2 ಪೂರ್ವಕಾಲವೃತ್ತಾ 2:9
ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.

2 ಪೂರ್ವಕಾಲವೃತ್ತಾ 3:1
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.

2 ಪೂರ್ವಕಾಲವೃತ್ತಾ 33:4
ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

2 ಪೂರ್ವಕಾಲವೃತ್ತಾ 36:14
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಎಜ್ರನು 3:12
ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.

ಕೀರ್ತನೆಗಳು 48:2
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

ಕೀರ್ತನೆಗಳು 50:2
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.

2 ಅರಸುಗಳು 21:4
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.