ಹಬಕ್ಕೂಕ್ಕ 2:10 in Kannada

ಕನ್ನಡ ಕನ್ನಡ ಬೈಬಲ್ ಹಬಕ್ಕೂಕ್ಕ ಹಬಕ್ಕೂಕ್ಕ 2 ಹಬಕ್ಕೂಕ್ಕ 2:10

Habakkuk 2:10
ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ.

Habakkuk 2:9Habakkuk 2Habakkuk 2:11

Habakkuk 2:10 in Other Translations

King James Version (KJV)
Thou hast consulted shame to thy house by cutting off many people, and hast sinned against thy soul.

American Standard Version (ASV)
Thou hast devised shame to thy house, by cutting off many peoples, and hast sinned against thy soul.

Bible in Basic English (BBE)
You have been a cause of shame to your house by cutting off a number of peoples, and sinning against your soul.

Darby English Bible (DBY)
Thou hast devised shame to thy house, by cutting off many peoples, and hast sinned against thine own soul.

World English Bible (WEB)
You have devised shame to your house, by cutting off many peoples, and have sinned against your soul.

Young's Literal Translation (YLT)
Thou hast counselled a shameful thing to thy house, To cut off many peoples, and sinful `is' thy soul.

Thou
hast
consulted
יָעַ֥צְתָּyāʿaṣtāya-ATS-ta
shame
בֹּ֖שֶׁתbōšetBOH-shet
to
thy
house
לְבֵיתֶ֑ךָlĕbêtekāleh-vay-TEH-ha
off
cutting
by
קְצוֹתqĕṣôtkeh-TSOTE
many
עַמִּ֥יםʿammîmah-MEEM
people,
רַבִּ֖יםrabbîmra-BEEM
and
hast
sinned
וְחוֹטֵ֥אwĕḥôṭēʾveh-hoh-TAY
against
thy
soul.
נַפְשֶֽׁךָ׃napšekānahf-SHEH-ha

Cross Reference

ನಹೂಮ 1:14
ನಿನ್ನ ವಿಷಯವಾಗಿ ಕರ್ತನು ಆಜ್ಞಾಪಿಸುವದೇ ನಂದರೆ--ನಿನ್ನ ಹೆಸರುಳ್ಳವರು ಇನ್ನು ಬಿತ್ತಲ್ಪಡರು; ನಿನ್ನ ದೇವರುಗಳ ಮನೆಯೊಳಗಿಂದ ಕೆತ್ತಿದ ವಿಗ್ರಹ ವನ್ನೂ ಎರಕ ಹೊಯಿದದ್ದನ್ನೂ ಕಡಿದುಬಿಡುವೆನು; ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.

2 ಅರಸುಗಳು 9:26
ನಾನೂ ನೀನೂ ಅವನ ತಂದೆಯಾದ ಅಹಾಬನ ಹಿಂದೆ ಕುದುರೆ ಏರಿಕೊಂಡು ಹೋಗುತ್ತಿರುವಾಗ ಕರ್ತನು ಈ ಭಾರವನ್ನು ಅವನ ಮೇಲೆ ಹೊರಿಸಿದನೆಂದು ಜ್ಞಾಪಕಮಾಡಿಕೋ. ಏನಂದರೆ--ನಾಬೋತನ ರಕ್ತವನ್ನೂ ಅವನ ಕುಮಾರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ ಎಂದು ಕರ್ತನು ಹೇಳುತ್ತಾನೆ. ಇದಲ್ಲದೆ--ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆ ನೆಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನ ವಾಕ್ಯದ ಪ್ರಕಾರ ಅವನನ್ನು ಎತ್ತಿಕೊಂಡು ಆ ಹೊಲ ದಲ್ಲಿ ಹಾಕಿಬಿಡು ಅಂದನು.

ಮತ್ತಾಯನು 27:25
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಹಬಕ್ಕೂಕ್ಕ 2:16
ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.

ಯೆರೆಮಿಯ 36:31
ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.

ಯೆರೆಮಿಯ 26:19
ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.

ಯೆರೆಮಿಯ 22:30
ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.

ಯೆಶಾಯ 33:11
ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.

ಯೆಶಾಯ 14:20
ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.

ಙ್ಞಾನೋಕ್ತಿಗಳು 8:36
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.

ಙ್ಞಾನೋಕ್ತಿಗಳು 1:18
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.

2 ಅರಸುಗಳು 10:7
ಈ ಪತ್ರವು ಅವರ ಬಳಿಗೆ ಬಂದಾಗ ಏನಾಯಿತಂದರೆ, ಅವರು ಅರಸನ ಮಕ್ಕಳನ್ನು ಹಿಡಿದು ಎಪ್ಪತ್ತು ಮಂದಿಯನ್ನು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿಟ್ಟು ಇಜ್ರೇಲಿನಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.

1 ಅರಸುಗಳು 2:23
ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.

ಅರಣ್ಯಕಾಂಡ 16:38
ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್‌ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.