ಹೋಶೇ 6:8 in Kannada

ಕನ್ನಡ ಕನ್ನಡ ಬೈಬಲ್ ಹೋಶೇ ಹೋಶೇ 6 ಹೋಶೇ 6:8

Hosea 6:8
ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.

Hosea 6:7Hosea 6Hosea 6:9

Hosea 6:8 in Other Translations

King James Version (KJV)
Gilead is a city of them that work iniquity, and is polluted with blood.

American Standard Version (ASV)
Gilead is a city of them that work iniquity; it is stained with blood.

Bible in Basic English (BBE)
Gilead is a town of evil-doers, marked with blood.

Darby English Bible (DBY)
Gilead is a city of them that work iniquity; it is tracked with blood.

World English Bible (WEB)
Gilead is a city of those who work iniquity; It is stained with blood.

Young's Literal Translation (YLT)
Gilead `is' a city of workers of iniquity, Slippery from blood.

Gilead
גִּלְעָ֕דgilʿādɡeel-AD
is
a
city
קִרְיַ֖תqiryatkeer-YAHT
work
that
them
of
פֹּ֣עֲלֵיpōʿălêPOH-uh-lay
iniquity,
אָ֑וֶןʾāwenAH-ven
and
is
polluted
עֲקֻבָּ֖הʿăqubbâuh-koo-BA
with
blood.
מִדָּֽם׃middāmmee-DAHM

Cross Reference

ಹೋಶೇ 12:11
ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 25:3
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

ಅಪೊಸ್ತಲರ ಕೃತ್ಯಗ 23:12
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

ಮತ್ತಾಯನು 26:15
ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಮಿಕ 7:2
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಹೋಶೇ 5:1
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.

ಹೋಶೇ 4:2
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;

ಯೆರೆಮಿಯ 11:19
ಆದರೆ ನಾನು ವಧೆಗೆ ತಕ್ಕೊಂಡು ಹೋಗುವ ಕುರಿಯಹಾಗೆ ಇಲ್ಲವೆ ಎತ್ತಿನ ಹಾಗೆ ಇದ್ದೆನು; ನನಗೆ ವಿರೋಧವಾಗಿ ಕಲ್ಪನೆಗಳನ್ನು ಕಲ್ಪಿಸು ತ್ತಾರೆಂದೂ ಮರವನ್ನೂ ಅದರ ಫಲವನ್ನೂ ಕೆಡಿಸಿ ಅವನ ಹೆಸರು ಇನ್ನು ಜ್ಞಾಪಕಮಾಡಲ್ಪಡದ ಹಾಗೆ ಜೀವಿತರ ದೇಶದೊಳಗಿಂದ ಅವನನ್ನು ಕಡಿದು ಬಿಡೋಣ ಎಂದು ಅಂದುಕೊಳ್ಳುತ್ತಾರೆಂದೂ ನನಗೆ ತಿಳಿಯಲಿಲ್ಲ.

ಯೆಶಾಯ 59:6
ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.

ಕೀರ್ತನೆಗಳು 59:2
ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

ಕೀರ್ತನೆಗಳು 10:8
ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;

1 ಅರಸುಗಳು 2:5
ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.

2 ಸಮುವೇಲನು 20:8
ಅವರು ಗಿಬ್ಯದ ಸವಿಾಪದಲ್ಲಿರುವ ದೊಡ್ಡಕಲ್ಲಿನ ಬಳಿಗೆ ಬಂದಾಗ ಅಮಾಸನು ಅವರ ಮುಂದೆ ಹೋದನು. ಆದರೆ ಯೋವಾಬನು ತಾನು ತೊಟ್ಟು ಕೊಂಡಿರುವ ಅಂಗಿಯ ಮೇಲೆ ಒಂದು ನಡು ಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕತ್ತಿಯು ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಅದು ಬಿತ್ತು.

2 ಸಮುವೇಲನು 3:27
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

ಯೆಹೋಶುವ 21:38
ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ