Jeremiah 50:26
ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ.
Jeremiah 50:26 in Other Translations
King James Version (KJV)
Come against her from the utmost border, open her storehouses: cast her up as heaps, and destroy her utterly: let nothing of her be left.
American Standard Version (ASV)
Come against her from the utmost border; open her store-houses; cast her up as heaps, and destroy her utterly; let nothing of her be left.
Bible in Basic English (BBE)
Come up against her one and all, let her store-houses be broken open: make her into a mass of stones, give her to the curse, till there is nothing of her to be seen.
Darby English Bible (DBY)
Come ye against her from every quarter, open her storehouses; pile her up like sheaves, and destroy her utterly: let nothing of her be left.
World English Bible (WEB)
Come against her from the utmost border; open her store-houses; cast her up as heaps, and destroy her utterly; let nothing of her be left.
Young's Literal Translation (YLT)
Come ye in to her from the extremity, Open ye her storehouses, Raise her up as heaps, and devote her, Let her have no remnant.
| Come | בֹּֽאוּ | bōʾû | boh-OO |
| border, utmost the from her against | לָ֤הּ | lāh | la |
| open | מִקֵּץ֙ | miqqēṣ | mee-KAYTS |
| her storehouses: | פִּתְח֣וּ | pitḥû | peet-HOO |
| up her cast | מַאֲבֻסֶ֔יהָ | maʾăbusêhā | ma-uh-voo-SAY-ha |
| as heaps, | סָלּ֥וּהָ | sāllûhā | SA-loo-ha |
| utterly: destroy and | כְמוֹ | kĕmô | heh-MOH |
| her let nothing | עֲרֵמִ֖ים | ʿărēmîm | uh-ray-MEEM |
| of her be | וְהַחֲרִימ֑וּהָ | wĕhaḥărîmûhā | veh-ha-huh-ree-MOO-ha |
| left. | אַל | ʾal | al |
| תְּהִי | tĕhî | teh-HEE | |
| לָ֖הּ | lāh | la | |
| שְׁאֵרִֽית׃ | šĕʾērît | sheh-ay-REET |
Cross Reference
ಯೆಶಾಯ 14:23
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯೆರೆಮಿಯ 50:10
ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.
ಯೆಶಾಯ 45:3
ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
ಪ್ರಕಟನೆ 19:15
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಪ್ರಕಟನೆ 18:21
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
ಪ್ರಕಟನೆ 14:19
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.
ಮಿಕ 7:10
ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
ಯೆರೆಮಿಯ 51:64
ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
ಯೆರೆಮಿಯ 51:44
ನಾನು ಬಾಬೆಲಿನಲ್ಲಿರುವ ಬೇಲ್‌ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ಯೆರೆಮಿಯ 51:25
ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
ಯೆರೆಮಿಯ 50:41
ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು.
ಯೆರೆಮಿಯ 50:23
ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
ಯೆರೆಮಿಯ 50:15
ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
ಯೆರೆಮಿಯ 50:13
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಯೆಶಾಯ 63:3
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
ಯೆಶಾಯ 25:10
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಯೆಶಾಯ 10:6
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಯೆಶಾಯ 5:26
ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;