ಯೋಹಾನನು 14:15 in Kannada

ಕನ್ನಡ ಕನ್ನಡ ಬೈಬಲ್ ಯೋಹಾನನು ಯೋಹಾನನು 14 ಯೋಹಾನನು 14:15

John 14:15
ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.

John 14:14John 14John 14:16

John 14:15 in Other Translations

King James Version (KJV)
If ye love me, keep my commandments.

American Standard Version (ASV)
If ye love me, ye will keep my commandments.

Bible in Basic English (BBE)
If you have love for me, you will keep my laws.

Darby English Bible (DBY)
If ye love me, keep my commandments.

World English Bible (WEB)
If you love me, keep my commandments.

Young's Literal Translation (YLT)
`If ye love me, my commands keep,

If
Ἐὰνeanay-AN
ye
love
ἀγαπᾶτέagapateah-ga-PA-TAY
me,
μεmemay
keep
τὰςtastahs

ἐντολὰςentolasane-toh-LAHS
my
τὰςtastahs
commandments.
ἐμὰςemasay-MAHS
τηρήσατεtērēsatetay-RAY-sa-tay

Cross Reference

1 ಯೋಹಾನನು 2:3
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.

1 ಯೋಹಾನನು 5:2
ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬದನ್ನು ತಿಳಿದುಕೊಳ್ಳುತ್ತೇವೆ.

1 ಯೋಹಾನನು 4:19
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

2 ಯೋಹಾನನು 1:6
ಆತನ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯ ಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

ಯೋಹಾನನು 14:21
ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.

ಯೋಹಾನನು 15:10
ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.

ಎಫೆಸದವರಿಗೆ 3:16
ನಿಮಗೆ ತನ್ನ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ಆತನ ಆತ್ಮನ ಮೂಲಕ ಆಂತರ್ಯದಲ್ಲಿ ವಿಶೇಷ ಬಲವನ್ನು ಅನುಗ್ರಹಿಸುವ ಹಾಗೆಯೂ

ಗಲಾತ್ಯದವರಿಗೆ 5:6
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.

ಮತ್ತಾಯನು 25:34
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;

2 ಕೊರಿಂಥದವರಿಗೆ 5:14
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.

ಮತ್ತಾಯನು 10:37
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.

2 ಕೊರಿಂಥದವರಿಗೆ 8:8
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.

1 ಪೇತ್ರನು 1:8
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಯೋಹಾನನು 8:42
ಯೇಸು ಅವರಿಗೆ--ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದ ಹೊರಟುಬಂದಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆದರೆ ಆತನೇ ನನ್ನನ್ನು ಕಳುಹಿಸಿದನು.

ಯೋಹಾನನು 21:15
ಅವರು ಊಟಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ--ಯೋನನ ಮಗನಾದ ಸೀಮೋನನೇ, ನೀನು ಇವುಗಳಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತ ನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇ ನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ

ಎಫೆಸದವರಿಗೆ 6:24
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್‌.

1 ಕೊರಿಂಥದವರಿಗೆ 16:22
ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).

ಫಿಲಿಪ್ಪಿಯವರಿಗೆ 1:20
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ಫಿಲಿಪ್ಪಿಯವರಿಗೆ 3:7
ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.