Psalm 31:15
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
Psalm 31:15 in Other Translations
King James Version (KJV)
My times are in thy hand: deliver me from the hand of mine enemies, and from them that persecute me.
American Standard Version (ASV)
My times are in thy hand: Deliver me from the hand of mine enemies, and from them that persecute me.
Bible in Basic English (BBE)
The chances of my life are in your hand; take me out of the hands of my haters, and of those who go after me.
Darby English Bible (DBY)
My times are in thy hand: deliver me from the hand of mine enemies, and from my persecutors.
Webster's Bible (WBT)
But I trusted in thee, O LORD: I said, Thou art my God.
World English Bible (WEB)
My times are in your hand. Deliver me from the hand of my enemies, and from those who persecute me.
Young's Literal Translation (YLT)
In Thy hand `are' my times, Deliver me from the hand of my enemies, And from my pursuers.
| My times | בְּיָדְךָ֥ | bĕyodkā | beh-yode-HA |
| are in thy hand: | עִתֹּתָ֑י | ʿittōtāy | ee-toh-TAI |
| deliver | הַצִּ֘ילֵ֤נִי | haṣṣîlēnî | ha-TSEE-LAY-nee |
| hand the from me | מִיַּד | miyyad | mee-YAHD |
| of mine enemies, | א֝וֹיְבַ֗י | ʾôybay | OY-VAI |
| persecute that them from and | וּמֵרֹדְפָֽי׃ | ûmērōdĕpāy | oo-may-roh-deh-FAI |
Cross Reference
ಯೋಬನು 24:1
ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
ಅಪೊಸ್ತಲರ ಕೃತ್ಯಗ 1:7
ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
ಯೋಹಾನನು 7:6
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
2 ಸಮುವೇಲನು 7:12
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಯೋಹಾನನು 12:27
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಯೋಹಾನನು 13:1
1 ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ಯೋಹಾನನು 17:1
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ಅಪೊಸ್ತಲರ ಕೃತ್ಯಗ 23:11
ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 27:24
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
2 ತಿಮೊಥೆಯನಿಗೆ 4:6
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
2 ಪೇತ್ರನು 1:14
ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
ಯೋಹಾನನು 7:30
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ.
ಲೂಕನು 9:51
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
ಕೀರ್ತನೆಗಳು 17:8
ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
ಕೀರ್ತನೆಗಳು 17:13
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
ಕೀರ್ತನೆಗಳು 71:10
ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಹೊಂಚು ಹಾಕುವ ವರು ಕೂಡಿಕೊಂಡು ಆಲೋಚನೆ ಮಾಡುತ್ತಾ--
ಕೀರ್ತನೆಗಳು 116:15
ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
ಕೀರ್ತನೆಗಳು 142:6
ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.
ಕೀರ್ತನೆಗಳು 143:3
ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
ಕೀರ್ತನೆಗಳು 143:9
ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
ಕೀರ್ತನೆಗಳು 143:12
ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
ಪ್ರಸಂಗಿ 3:1
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
ಯೆರೆಮಿಯ 15:20
ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
1 ಸಮುವೇಲನು 26:10
ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.