Psalm 83:2
ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.
Psalm 83:2 in Other Translations
King James Version (KJV)
For, lo, thine enemies make a tumult: and they that hate thee have lifted up the head.
American Standard Version (ASV)
For, lo, thine enemies make a tumult; And they that hate thee have lifted up the head.
Bible in Basic English (BBE)
For see! those who make war on you are out of control; your haters are lifting up their heads.
Darby English Bible (DBY)
For behold, thine enemies make a tumult; and they that hate thee lift up the head.
Webster's Bible (WBT)
A song, or Psalm of Asaph. Keep not thou silence, O God: hold not thy peace, and be not still, O God.
World English Bible (WEB)
For, behold, your enemies are stirred up. Those who hate you have lifted up their heads.
Young's Literal Translation (YLT)
For, lo, Thine enemies do roar, And those hating Thee have lifted up the head,
| For, | כִּֽי | kî | kee |
| lo, | הִנֵּ֣ה | hinnē | hee-NAY |
| thine enemies | א֭וֹיְבֶיךָ | ʾôybêkā | OY-vay-ha |
| make a tumult: | יֶהֱמָי֑וּן | yehĕmāyûn | yeh-hay-ma-YOON |
| hate that they and | וּ֝מְשַׂנְאֶ֗יךָ | ûmĕśanʾêkā | OO-meh-sahn-A-ha |
| thee have lifted up | נָ֣שְׂאוּ | nāśĕʾû | NA-seh-oo |
| the head. | רֹֽאשׁ׃ | rōš | rohsh |
Cross Reference
ಕೀರ್ತನೆಗಳು 81:15
ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.
ನ್ಯಾಯಸ್ಥಾಪಕರು 8:28
ಮಿದ್ಯಾನ್ಯರು ತಮ್ಮ ತಲೆಯನ್ನು ತಿರಿಗಿ ಎತ್ತಕೂಡದ ಹಾಗೆ ಇಸ್ರಾಯೇಲ್ಯರ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು. ದೇಶವು ಗಿದ್ಯೋನನ ದಿವಸ ಗಳಲ್ಲಿ ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
ಅಪೊಸ್ತಲರ ಕೃತ್ಯಗ 4:25
ನಿನ್ನ ಸೇವಕ ನಾದ ದಾವೀದನ ಬಾಯಿಂದ--ಅನ್ಯಜನರು ಯಾಕೆ ರೇಗಿದರು? ಮತ್ತು ಜನರು ವ್ಯರ್ಥವಾದವುಗಳನ್ನು ಯಾಕೆ ಊಹಿಸಿದರು?
ಅಪೊಸ್ತಲರ ಕೃತ್ಯಗ 16:22
ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ಅಪೊಸ್ತಲರ ಕೃತ್ಯಗ 17:5
ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ಅಪೊಸ್ತಲರ ಕೃತ್ಯಗ 19:28
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.
ಅಪೊಸ್ತಲರ ಕೃತ್ಯಗ 21:30
ಆಗ ಪಟ್ಟಣವೆಲ್ಲಾ ಕದಲಿಹೋಯಿತು. ಜನರು ಒಟ್ಟಾಗಿ ಓಡಿಬಂದು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದ ಕೂಡಲೆ ಬಾಗಿಲುಗಳು ಮುಚ್ಚಲ್ಪಟ್ಟವು.
ಅಪೊಸ್ತಲರ ಕೃತ್ಯಗ 22:22
ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
ಅಪೊಸ್ತಲರ ಕೃತ್ಯಗ 23:10
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
ಮತ್ತಾಯನು 27:24
ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು.
ದಾನಿಯೇಲನು 5:20
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಯೆರೆಮಿಯ 1:19
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
ಕೀರ್ತನೆಗಳು 2:1
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಕೀರ್ತನೆಗಳು 74:4
ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
ಕೀರ್ತನೆಗಳು 74:23
ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ಕೀರ್ತನೆಗಳು 75:4
ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
ಕೀರ್ತನೆಗಳು 93:3
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಯೆಶಾಯ 17:12
ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
ಯೆಶಾಯ 37:23
ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
ಯೆಶಾಯ 37:29
ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
2 ಅರಸುಗಳು 19:28
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.