Romans 9:14
ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
Romans 9:14 in Other Translations
King James Version (KJV)
What shall we say then? Is there unrighteousness with God? God forbid.
American Standard Version (ASV)
What shall we say then? Is there unrighteousness with God? God forbid.
Bible in Basic English (BBE)
What may we say then? is God not upright? let it not be said.
Darby English Bible (DBY)
What shall we say then? [Is there] unrighteousness with God? Far be the thought.
World English Bible (WEB)
What shall we say then? Is there unrighteousness with God? May it never be!
Young's Literal Translation (YLT)
What, then, shall we say? unrighteousness `is' with God? let it not be!
| What | Τί | ti | tee |
| shall we say | οὖν | oun | oon |
| then? | ἐροῦμεν | eroumen | ay-ROO-mane |
there Is | μὴ | mē | may |
| unrighteousness | ἀδικία | adikia | ah-thee-KEE-ah |
| with | παρὰ | para | pa-RA |
| τῷ | tō | toh | |
| God? | θεῷ | theō | thay-OH |
| μὴ | mē | may | |
| God forbid. | γένοιτο· | genoito | GAY-noo-toh |
Cross Reference
2 ಪೂರ್ವಕಾಲವೃತ್ತಾ 19:7
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಧರ್ಮೋಪದೇಶಕಾಂಡ 32:4
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಕೀರ್ತನೆಗಳು 145:17
ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
ಕೀರ್ತನೆಗಳು 92:15
ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ಯೋಬನು 8:3
ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
ಪ್ರಕಟನೆ 16:7
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
ಯೋಬನು 34:10
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
ಆದಿಕಾಂಡ 18:25
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ಪ್ರಕಟನೆ 15:3
ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ರೋಮಾಪುರದವರಿಗೆ 3:5
ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ).
ರೋಮಾಪುರದವರಿಗೆ 3:1
ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
ರೋಮಾಪುರದವರಿಗೆ 2:5
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಯೆರೆಮಿಯ 12:1
ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
ಯೋಬನು 35:2
ನನ್ನ ನೀತಿಯು ದೇವರ ನೀತಿ ಗಿಂತ ದೊಡ್ಡದು ಎಂದು ನೀನು ಹೇಳಿದ್ದು ಸರಿಯಾದ ದ್ದೆಂದು ನೀನು ನೆನಸುತ್ತೀಯೋ?
ಯೋಬನು 34:18
ಅರಸನಿಗೆ ದುಷ್ಟನೆಂದೂ ಪ್ರಧಾನರಿಗೆ ಬಲಹೀನರೆಂದೂ ಹೇಳುವದುಂಟೋ?