Solomon 6:4 in Kannada

ಕನ್ನಡ ಕನ್ನಡ ಬೈಬಲ್ ಪರಮ ಗೀತ ಪರಮ ಗೀತ 6 ಪರಮ ಗೀತ 6:4

Song Of Solomon 6:4
ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.

Song Of Solomon 6:3Song Of Solomon 6Song Of Solomon 6:5

Song Of Solomon 6:4 in Other Translations

King James Version (KJV)
Thou art beautiful, O my love, as Tirzah, comely as Jerusalem, terrible as an army with banners.

American Standard Version (ASV)
Thou art fair, O my love, as Tirzah, Comely as Jerusalem, Terrible as an army with banners.

Bible in Basic English (BBE)
You are beautiful, O my love, as Tirzah, as fair as Jerusalem; you are to be feared like an army with flags.

Darby English Bible (DBY)
Thou art fair, my love, as Tirzah, Comely as Jerusalem, Terrible as troops with banners:

World English Bible (WEB)
You are beautiful, my love, as Tirzah, Lovely as Jerusalem, Awesome as an army with banners.

Young's Literal Translation (YLT)
Fair `art' thou, my friend, as Tirzah, Comely as Jerusalem, Awe-inspiring as bannered hosts.

Thou
יָפָ֨הyāpâya-FA
art
beautiful,
אַ֤תְּʾatat
O
my
love,
רַעְיָתִי֙raʿyātiyra-ya-TEE
as
Tirzah,
כְּתִרְצָ֔הkĕtirṣâkeh-teer-TSA
comely
נָאוָ֖הnāʾwâna-VA
as
Jerusalem,
כִּירוּשָׁלִָ֑םkîrûšālāimkee-roo-sha-la-EEM
terrible
אֲיֻמָּ֖הʾăyummâuh-yoo-MA
as
an
army
with
banners.
כַּנִּדְגָּלֽוֹת׃kannidgālôtka-need-ɡa-LOTE

Cross Reference

ಪರಮ ಗೀತ 6:10
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?

ಕೀರ್ತನೆಗಳು 48:2
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್‌ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.

1 ಅರಸುಗಳು 14:17
ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.

ಕೀರ್ತನೆಗಳು 50:2
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.

ಪರಮ ಗೀತ 2:14
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.

ಪರಮ ಗೀತ 4:7
ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.

ಪ್ರಲಾಪಗಳು 2:15
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?

ಪ್ರಕಟನೆ 21:2
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.

ಪ್ರಕಟನೆ 19:14
ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.

ಎಫೆಸದವರಿಗೆ 5:27
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.

2 ಕೊರಿಂಥದವರಿಗೆ 10:4
(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).

1 ಅರಸುಗಳು 15:21
ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.

1 ಅರಸುಗಳು 15:33
ಯೆಹೂದದ ಅರಸನಾದ ಆಸನ ಮೂರನೇ ವರುಷದಲ್ಲಿ ಅಹೀಯನ ಮಗನಾದ ಬಾಷನು ಸಮಸ್ತ ಇಸ್ರಾಯೇಲ್ಯರ ಮೇಲೆ ತಿರ್ಚದಲ್ಲಿ ಆಳಲು ಆರಂಭಿಸಿ ಇಪ್ಪತ್ತನಾಲ್ಕು ವರುಷ ಆಳಿದನು.

ಕೀರ್ತನೆಗಳು 144:4
ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.

ಪರಮ ಗೀತ 1:5
ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.

ಪರಮ ಗೀತ 1:15
ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.

ಪರಮ ಗೀತ 5:2
ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.

ಯೆಹೆಜ್ಕೇಲನು 16:13
ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.

ಜೆಕರ್ಯ 12:3
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.

ಅರಣ್ಯಕಾಂಡ 24:5
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!