ರೋಮಾಪುರದವರಿಗೆ 12:8
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.
1 ಥೆಸಲೊನೀಕದವರಿಗೆ 5:12
ಸಹೋದರರೇ, ಯಾರು ನಿಮ್ಮಲ್ಲಿ ಪ್ರಯಾಸಪಟ್ಟು ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು ನಿಮಗೆ ಬುದ್ಧಿಹೇಳುತ್ತಾರೋ ಅವರನ್ನು ಲಕ್ಷಿಸಿರಿ.
1 ತಿಮೊಥೆಯನಿಗೆ 3:4
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನೂ ಅಧೀನದಲ್ಲಿ ಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವ ನಾಗಿರಬೇಕು.
1 ತಿಮೊಥೆಯನಿಗೆ 3:5
(ಸ್ವಂತ ಮನೆಯವರನ್ನು ಆಳುವದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿ ಸುವನು)?
1 ತಿಮೊಥೆಯನಿಗೆ 3:12
ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
1 ತಿಮೊಥೆಯನಿಗೆ 5:17
ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು.
ತೀತನಿಗೆ 3:8
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ತೀತನಿಗೆ 3:14
ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.
Occurences : 8
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்