ಮತ್ತಾಯನು 2:4
ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು.
ಲೂಕನು 15:26
ಅವನು ಸೇವಕರಲ್ಲಿ ಒಬ್ಬನನ್ನು ಕರೆದು ಇವುಗಳು ಏನೆಂದು ಕೇಳಿದನು.
ಲೂಕನು 18:36
ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು.
ಯೋಹಾನನು 4:52
ಆಗ ಅವನು--ಯಾವ ಗಳಿಗೆಯಲ್ಲಿ ಅವನಿಗೆ ಗುಣವಾಗತೊಡಗಿತು ಎಂದು ಅವರನ್ನು ವಿಚಾರಿಸಿದಾಗ ಅವರು ನಿನ್ನೆ ಏಳನೇ ತಾಸಿನಲ್ಲಿ ಜ್ವರವು ಅವನನ್ನು ಬಿಟ್ಟಿತು ಎಂದು ಅವನಿಗೆ ಹೇಳಿದರು.
ಯೋಹಾನನು 13:24
ಆದದರಿಂದ ಸೀಮೋನ ಪೇತ್ರನು ಅವನಿಗೆ ಸನ್ನೆ ಮಾಡಿ ಆತನು ಯಾರ ವಿಷಯವಾಗಿ ಮಾತನಾಡಿದನೆಂದು ಕೇಳಿದನು.
ಅಪೊಸ್ತಲರ ಕೃತ್ಯಗ 4:7
ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 10:18
ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.
ಅಪೊಸ್ತಲರ ಕೃತ್ಯಗ 10:29
ಆದಕಾರಣ ನೀವು ನನ್ನನ್ನು ಕರೇಕಳುಹಿಸಿದಾಗ ನಾನು ಯಾವ ಎದುರು ಮಾತನ್ನೂ ಹೇಳದೆ ತಕ್ಷಣ ಬಂದೆನು. ಈಗ ನೀವು ನನ್ನನ್ನು ಕರೆಯಿಸಿದ ಉದ್ದೇಶವೇನು ಎಂದು ನಾನು ಕೇಳುತ್ತೇನೆ ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 21:33
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ಅಪೊಸ್ತಲರ ಕೃತ್ಯಗ 23:19
ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
Occurences : 12
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்