Base Word
אֶזְרָח
Short Definitiona spontaneous growth, i.e., native (tree or persons)
Long Definitiona native (one rising from the soil)
Derivationfrom H2224 (in the sense of springing up)
International Phonetic Alphabetʔɛd͡zˈrɔːħ
IPA modʔɛzˈʁɑːχ
Syllableʾezrāḥ
Dictionedz-RAW
Diction Modez-RAHK
Usagebay tree, (home-)born (in the land), of the (one's own) country (nation)
Part of speechn-m

ವಿಮೋಚನಕಾಂಡ 12:19
ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.

ವಿಮೋಚನಕಾಂಡ 12:48
ನಿನ್ನ ಜೊತೆ ಯಲ್ಲಿ ಪ್ರವಾಸಮಾಡಿದ ಅನ್ಯನು ಕರ್ತನಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ; ತರುವಾಯ ಅವನು ಅದನ್ನು ಆಚರಿಸುವದಕ್ಕೆ ಸವಿಾಪ ಬರಲಿ; ಅಂಥವನು ಸ್ವದೇಶ ದಲ್ಲಿ ಹುಟ್ಟಿದವನಂತೆ ಇರುವನು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.

ವಿಮೋಚನಕಾಂಡ 12:49
ಮನೆಯಲ್ಲಿ ಹುಟ್ಟಿದವನಿಗೂ ನಿಮ್ಮಲ್ಲಿ ಪ್ರವಾಸಿ ಯಾಗಿರುವ ಅನ್ಯನಿಗೂ ಒಂದೇ ನ್ಯಾಯಪ್ರಮಾಣ ವಿರಬೇಕು ಎಂದು ಹೇಳಿದನು.

ಯಾಜಕಕಾಂಡ 16:29
ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.

ಯಾಜಕಕಾಂಡ 17:15
ನಿಮ್ಮ ದೇಶದವನಾಗಲಿ ಪರಕೀಯನಾಗಲಿ ತನ್ನ ಷ್ಟಕ್ಕೆ ತಾನೇ ಸತ್ತುಹೋದದ್ದನ್ನು ಇಲ್ಲವೆ ಮೃಗಗಳಿಂದ ಹರಿಯಲ್ಪಟ್ಟಿರುವದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು, ತರುವಾಯ ಅವನು ಶುದ್ಧನಾಗಿರುವನು.

ಯಾಜಕಕಾಂಡ 18:26
ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.

ಯಾಜಕಕಾಂಡ 19:34
ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.

ಯಾಜಕಕಾಂಡ 23:42
ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.

ಯಾಜಕಕಾಂಡ 24:16
ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.

ಯಾಜಕಕಾಂಡ 24:22
ನಿಮಗೆ ಒಂದೇ ವಿಧವಾದ ನ್ಯಾಯಪ್ರಮಾಣವಿರ ಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

Occurences : 17

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்