Base Word
כֶּסֶף
Short Definitionsilver (from its pale color); by implication, money
Long Definitionsilver, money
Derivationfrom H3700
International Phonetic Alphabetkɛˈsɛp
IPA modkɛˈsɛf
Syllablekesep
Dictionkeh-SEP
Diction Modkeh-SEF
Usagemoney, price, silver(-ling)
Part of speechn-m

ಆದಿಕಾಂಡ 13:2
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

ಆದಿಕಾಂಡ 17:12
ನಿಮ್ಮ ವಂಶಾವಳಿಗಳಲ್ಲಿ ಪ್ರತಿಯೊಂದು ಗಂಡು ಮಗುವಿಗೆ ಎಂಟು ದಿನಗಳಾದ ಮೇಲೆ ಸುನ್ನತಿಮಾಡಿಸಬೇಕು; ಮನೆಯಲ್ಲಿ ಹುಟ್ಟಿದವನಾಗಲಿ ನಿನ್ನ ಸಂತತಿಯಲ್ಲದೆ ಪರರ ಮಕ್ಕಳನ್ನು ಹಣಕೊಟ್ಟು ಕೊಂಡುಕೊಳ್ಳಲ್ಪಟ್ಟವರಾಗಲಿ

ಆದಿಕಾಂಡ 17:13
ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ನಿನ್ನ ಹಣದಿಂದ ಕೊಂಡುಕೊಂಡ ವನಿಗೂ ಸುನ್ನತಿಮಾಡಿಸತಕ್ಕದ್ದು. ಹೀಗೆ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವದು.

ಆದಿಕಾಂಡ 17:23
ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.

ಆದಿಕಾಂಡ 17:27
ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.

ಆದಿಕಾಂಡ 20:16
ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು.

ಆದಿಕಾಂಡ 23:9
ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು.

ಆದಿಕಾಂಡ 23:13
ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು.

ಆದಿಕಾಂಡ 23:15
ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್‌ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

ಆದಿಕಾಂಡ 23:16
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.

Occurences : 403

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்