Matthew 17:17
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Then | ἀποκριθεὶς | apokritheis | ah-poh-kree-THEES |
δὲ | de | thay | |
Jesus | ὁ | ho | oh |
answered | Ἰησοῦς | iēsous | ee-ay-SOOS |
and said, | εἶπεν | eipen | EE-pane |
O | Ὦ | ō | oh |
faithless | γενεὰ | genea | gay-nay-AH |
and | ἄπιστος | apistos | AH-pee-stose |
perverse | καὶ | kai | kay |
generation, | διεστραμμένη | diestrammenē | thee-ay-strahm-MAY-nay |
how | ἕως | heōs | AY-ose |
long | πότε | pote | POH-tay |
be I shall | ἔσομαι | esomai | A-soh-may |
with | μεθ'' | meth | mayth |
you? | ὑμῶν | hymōn | yoo-MONE |
how | ἕως | heōs | AY-ose |
long | πότε | pote | POH-tay |
suffer I shall | ἀνέξομαι | anexomai | ah-NAY-ksoh-may |
you? | ὑμῶν | hymōn | yoo-MONE |
bring | φέρετέ | pherete | FAY-ray-TAY |
him | μοι | moi | moo |
hither | αὐτὸν | auton | af-TONE |
to me. | ὧδε | hōde | OH-thay |
Cross Reference
Hebrews 3:16
ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ.
Acts 13:18
ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
John 20:27
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
Luke 24:25
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Luke 9:41
ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
Mark 16:14
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
Mark 9:19
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
Matthew 16:8
ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
Matthew 8:26
ಆಗ ಆತನು ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ಯಾಕೆ ಭಯಪಡುತ್ತೀರಿ ಎಂದು ಹೇಳಿ ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು. ಆಗ ಅಲ್ಲಿ ದೊಡ್ಡ ಶಾಂತತೆ ಉಂಟಾಯಿತು.
Matthew 6:30
ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
Exodus 16:28
ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
Exodus 10:3
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
Matthew 13:58
ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ.
Jeremiah 4:14
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
Proverbs 6:9
ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
Proverbs 1:22
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
Psalm 95:10
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.
Numbers 14:27
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
Numbers 14:11
ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?