Psalm 129:1
ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
Many a time | רַ֭בַּת | rabbat | RA-baht |
have they afflicted | צְרָר֣וּנִי | ṣĕrārûnî | tseh-ra-ROO-nee |
youth, my from me | מִנְּעוּרַ֑י | minnĕʿûray | mee-neh-oo-RAI |
may Israel | יֹֽאמַר | yōʾmar | YOH-mahr |
now | נָ֝א | nāʾ | na |
say: | יִשְׂרָאֵֽל׃ | yiśrāʾēl | yees-ra-ALE |
Cross Reference
Psalm 124:1
ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
Hosea 2:15
ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
Jeremiah 2:2
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
Hosea 11:1
ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
Psalm 120:1
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
Psalm 127:1
ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
Psalm 128:1
ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
Isaiah 47:12
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.
Jeremiah 22:21
ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
Lamentations 1:3
ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
Ezekiel 23:3
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
Psalm 126:1
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
Psalm 125:1
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
Psalm 123:1
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
Exodus 1:22
ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Exodus 5:7
ನೀವು ಇನ್ನು ಇಟ್ಟಿಗೆಗಳನ್ನು ಮಾಡುವದಕ್ಕೆ ಮೊದಲಿನ ಹಾಗೆ ಜನರಿಗೆ ಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.
Judges 2:15
ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.
Judges 3:8
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್‌ರಿಷಾತಯಿಮ್‌ನ್ನು ಎಂಟು ವರುಷ ಸೇವಿಸಿದರು.
Judges 10:8
ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
1 Samuel 13:19
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
Ezra 4:1
ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
Psalm 88:15
ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.
Psalm 121:1
ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
Psalm 122:1
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
Exodus 1:12
ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.