Revelation 2:25 in Kannada

Kannada Kannada Bible Revelation Revelation 2 Revelation 2:25

Revelation 2:25
ಆದರೆ ಈಗ ನಿಮಗಿರು ವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದು ಕೊಂಡಿರ್ರಿ.

Revelation 2:24Revelation 2Revelation 2:26

Revelation 2:25 in Other Translations

King James Version (KJV)
But that which ye have already hold fast till I come.

American Standard Version (ASV)
Nevertheless that which ye have, hold fast till I come.

Bible in Basic English (BBE)
But what you have, keep safe till I come.

Darby English Bible (DBY)
but what ye have hold fast till I shall come.

World English Bible (WEB)
Nevertheless, hold firmly that which you have, until I come.

Young's Literal Translation (YLT)
but that which ye have -- hold ye, till I may come;

But
πλὴνplēnplane
that
which
hooh
ye
have
ἔχετεecheteA-hay-tay
fast
hold
already
κρατήσατεkratēsatekra-TAY-sa-tay
till
ἄχριςachrisAH-hrees
I

οὗhouoo

ἂνanan
come.
ἥξωhēxōAY-ksoh

Cross Reference

Revelation 3:11
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;

Revelation 22:20
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್‌. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.

Revelation 22:7
ಇಗೋ, ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಗಳನ್ನು ಕಾಪಾಡುವವನು ಧನ್ಯನು ಎಂದು ಹೇಳಿದನು.

Revelation 3:3
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

Revelation 1:7
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

Hebrews 10:23
ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).

Hebrews 4:14
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.

Hebrews 3:6
ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.

1 Thessalonians 5:21
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.

1 Corinthians 11:26
ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.

1 Corinthians 4:5
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.

Romans 12:9
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.

John 21:22
ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.

John 14:3
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.

2 Peter 3:10
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.

Acts 11:28
ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಆತ್ಮನಿಂದ ಸೂಚಿಸಿದನು. ಅದು ಕ್ಲೌದ್ಯ ಕೈಸರನ ದಿವಸಗಳಲ್ಲಿ ಉಂಟಾಯಿತು.