Matthew 23:24
ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು.
1 Corinthians 15:54
ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
2 Corinthians 2:7
ಇನ್ನು ಮೇಲೆ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು.
2 Corinthians 5:4
ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
Hebrews 11:29
ನಂಬಿಕೆಯಿಂದಲೇ ಇಸ್ರಾಯೇಲ್ಯರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು; ಐಗುಪ್ತ ದೇಶದವರು ಅದನ್ನು ದಾಟು ವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.
1 Peter 5:8
ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
Revelation 12:16
ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்