No lexicon data found for Strong's number: 455

Matthew 2:11
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.

Matthew 3:16
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.

Matthew 5:2
ಆತನು ಬಾಯಿ ತೆರೆದು ಅವರಿಗೆ ಬೋಧಿಸಿ ಹೇಳಿದ್ದೇನಂದರೆ --

Matthew 7:7
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.

Matthew 7:8
ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.

Matthew 9:30
ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು; ಮತ್ತು ಯೇಸು ಅವರಿಗೆ--ಇದು ಯಾರಿಗೂ ಗೊತ್ತಾಗಬಾರದು ನೋಡಿರಿ ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟು ಹೇಳಿದನು.

Matthew 13:35
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.

Matthew 17:27
ಹೀಗಿದ್ದರೂ ನಾವು ಅವರನ್ನು ಅಭ್ಯಂತರಪಡಿಸದಂತೆ ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕು; ಆಗ ಮೊದಲು ಬರುವ ಮಾನನ್ನು ಹಿಡಿದು ಅದರ ಬಾಯನ್ನು ತೆರೆದರೆ ಅದರಲ್ಲಿ ಒಂದು ನಾಣ್ಯವನ್ನು ಕಾಣುವಿ; ಅದನ್ನು ತಕ್ಕೊಂಡು ನನ್ನದೂ ನಿನ್ನದೂ ಎಂದು ಹೇಳಿ ಅವರಿಗೆ ಕೊಡು ಎಂದು ಹೇಳಿದ

Matthew 20:33
ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು.

Matthew 25:11
ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು.

Occurences : 77

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்