ಮತ್ತಾಯನು 4:7
ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
ಮತ್ತಾಯನು 8:8
ಅದಕ್ಕೆ ಶತಾಧಿಪತಿಯು ಪ್ರತ್ಯುತ್ತರವಾಗಿ--ಕರ್ತನೇ, ನೀನು ನನ್ನ ಮನೆ ಯೊಳಗೆ ಬರುವದಕ್ಕೆ ನಾನು ಯೋಗ್ಯನಲ್ಲ; ಆದರೆ ನೀನು ಒಂದು ಮಾತು ಮಾತ್ರ ಹೇಳು, ಆಗ ನನ್ನ ಸೇವಕನು ಸ್ವಸ್ಥನಾಗುವನು.
ಮತ್ತಾಯನು 13:28
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು.
ಮತ್ತಾಯನು 13:29
ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ.
ಮತ್ತಾಯನು 14:8
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ-- ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು.
ಮತ್ತಾಯನು 17:26
ಪೇತ್ರನು ಆತನಿಗೆ-- ಅನ್ಯರಿಂದ ಎಂದು ಹೇಳಲಾಗಿ ಆತನು ಅವನಿಗೆ--ಹಾಗಾದರೆ ಮಕ್ಕಳು ಸ್ವತಂತ್ರರೇ.
ಮತ್ತಾಯನು 19:21
ಯೇಸು ಅವನಿಗೆ--ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ ಹೋಗಿ ನಿನಗೆ ಇದ್ದದ್ದನ್ನು ಮಾರಿ ಬಡವರಿಗೆ ಕೊಡು; ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವದು; ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.
ಮತ್ತಾಯನು 21:27
ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ.
ಮತ್ತಾಯನು 25:21
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
ಮತ್ತಾಯನು 25:23
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
Occurences : 58
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்