Matthew 11:21
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
Mark 6:45
ಆತನು ಜನರನ್ನು ಕಳುಹಿಸುವಷ್ಟರಲ್ಲಿ ತನ್ನ ಶಿಷ್ಯರು ಕೂಡಲೆ ದೋಣಿಯನ್ನು ಹತ್ತಿ ಮುಂದಾಗಿ ಆಚೇ ಕಡೆಯ ಬೇತ್ಸಾಯಿದಕ್ಕೆ ಹೋಗುವಂತೆ ಅವರನ್ನು ಬಲವಂತ ಮಾಡಿದನು.
Mark 8:22
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
Luke 9:10
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
Luke 10:13
ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
John 1:44
ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು.
John 12:21
ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
Occurences : 7
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்