Skip to content
TAMIL CHRISTIAN SONGS .IN
TAMIL CHRISTIAN SONGS .IN
  • Lyrics
  • Chords
  • Bible
  • /
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z

Index
  • A
  • B
  • C
  • D
  • E
  • F
  • G
  • H
  • I
  • J
  • K
  • L
  • M
  • N
  • O
  • P
  • Q
  • R
  • S
  • T
  • U
  • V
  • W
  • X
  • Y
  • Z
Zechariah 9 KJV ASV BBE DBY WBT WEB YLT

Zechariah 9 in Kannada WBT Compare Webster's Bible

Zechariah 9

1 ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.

2 ಹಮಾತು ಬಹಳ ಜ್ಞಾನವಿರುವ ತೂರ್‌ ಚೀದೋನ್‌ ಸಹ ಅದರ ಮೇರೆಯಾಗಿದೆ.

3 ತೂರ್‌ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.

4 ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.

5 ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.

6 ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.

7 ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.

8 ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.

9 ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.

10 ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

11 ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.

12 ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.

13 ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.

14 ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.

15 ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.

16 ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.

17 ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

  • Tamil
  • Hindi
  • Malayalam
  • Telugu
  • Kannada
  • Gujarati
  • Punjabi
  • Bengali
  • Oriya
  • Nepali

By continuing to browse the site, you are agreeing to our use of cookies.

Close